ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 06:
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವತಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಆಸ್ಕಾಡ್ ಯೋಜನೆಯಡಿ ಪ್ರಯೋಗಾಲಯಗಳಿಗೆ ಅಗತ್ಯವಿರುವ ಪರಿಕರಗಳನ್ನು ಸರಬರಾಜು ಮಾಡಲಾಗಿದ್ದು, ಪ್ರಯೋಗಾಲಯದಲ್ಲಿ ತಾಲ್ಲೂಕು ಪಶು ಆಸ್ಪತ್ರೆ ಹಾಗೂ ತಾಲ್ಲೂಕಿನ ಅಧೀನ ಸಂಸ್ಥೆಗಳಿಂದ ಸ್ವೀಕರಿಸಲಾಗುವ ಜಾನುವಾರುಗಳ BLOOD, URINE ಮತ್ತು DUNG ಮಾದರಿಗಳನ್ನು ಪರಿಶೀಲಿಸಲು ಅಗತ್ಯವಿರುವ “ ಪ್ರಯೋಗಾಲಯದ ಸೇವೆಯನ್ನು” ಒದಗಿಸಲು ಅರ್ಹ ಸಂಸ್ಥೆಗಳಿಂದ ದರ ಪಟ್ಟಿ ಆಹ್ವಾನಿಸಲಾಗಿದೆ.
ದರಪಟ್ಟಿಯಲ್ಲಿ “ಪ್ರಯೋಗಾಲಯದ ಸೇವಾಶುಲ್ಕ” ಹಾಗೂ ಜಿ.ಎಸ್.ಟಿ ಯನ್ನು ಪ್ರತ್ಯೇಕವಾಗಿ ನಮೂದಿಸಬೇಕು. ದರಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಖ್ಯ ಪಶುವೈದ್ಯಾಧಿಕಾರಿಗಳ (ಆಡಳಿತ) ಕಚೇರಿ ಪಶು ಆಸ್ಪತ್ರೆ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ ಅಂಚೆ ಅಥವಾ ಮುದ್ದಾಂ ಆಗಿ ಡಿಸೆಂಬರ್ 16 2024ರ ಸಂಜೆ 5.00 ಗಂಟೆಯೊಳಗೆ ತಲುಪುವಂತೆ ಕಳುಗಿಸಬೇಕು. ದರಪಟ್ಟಿಯನ್ನು ಡಿಸೆಂಬರ್ 17 2024 ರಂದು ತೆರಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದು ಎಂದು ಆನೇಕಲ್ ತಾಲ್ಲೂಕು, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿದ್ದಾರೆ.