ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ;ಮತ ಏಣಿಕೆ ಕೇಂದ್ರದ ಸಿದ್ದತೆ 

0
48
Share this Article
0
(0)
Views: 0
ಧಾರವಾಡ ಮೇ.30:
 
ಮತ ಏಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿ, ಸಭೆ ಜರುಗಿಸಿದ ಚುನಾವಣಾಧಿಕಾರಿ ದಿವ್ಯ ಪ್ರಭು
 
ಈಗಾಗಲೇ ಮೇ 7 ರಂದು ಜರುಗಿರುವ ಧಾರವಾಡ-11 ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತಗಳ ಏಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಏಣಿಕೆ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದ್ದು, ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜಂಟ, ಮತ ಏಣಿಕಾ ಏಜಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮತ ಏಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ, ಮಾತನಾಡಿದರು.
ಮತ ಏಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜಂಟರು, ಮತ ಏಣಿಕೆ ಏಜಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ದತೆ ಮಾಡಲಾಗಿದೆ. ಅಂದು ಮತ ಏಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ, ಗುಂಪು ಸೇರುವುದು ಮಾಡುವಂತಿಲ್ಲ ಎಂದು ಅವರು ಹೇಳಿದರು.
 
ಮತ ಏಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರಲು ಅವಕಾಶವಿಲ್ಲ. ಯಾವುದೇ ರೀತಿಯ ಆಯುಧ, ಗುಟಕಾ, ಬೀಡಿ ಸಿಗರೇಟ್, ಎಲೆ ಅಡಿಕೆ ತರುವುದನ್ನು ಸಹ ನಿಬರ್ಂಧಿಸಲಾಗಿದೆ. ಚುನಾವಣಾ ಆಯೋಗದ ಎಲ್ಲ ನಿಯಮಗಳನ್ನು ಪಾಲಿಸುವ ಮೂಲಕ ಮತ ಏಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ತಿಳಿಸಿದರು.
ಜೂನ್ 4 ರಂದು ಬೆಳಿಗ್ಗೆ ಸ್ಟ್ರಾಂಗ್ ರೂಮ್ ಓಪನ್ ಮಾಡುವುದರಿಂದ ಹಿಡಿದು ಸಂಜೆ ಇವಿಎಂ ಮಷಿನ್ಗಳು ಭದ್ರತಾ ಕೊಠಡಿಗೆ ಹೋಗುವವರೆಗಿನ ಎಲ್ಲ ಹಂತಗಳನ್ನು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ಸಭೆಯಲ್ಲಿ ವಿವರಿಸಿದರು.
ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಮಾತನಾಡಿ, ವಾಹನ ಪಾಕಿರ್ಂಗ್ ಸ್ಥಳ, ಪೊಲೀಸ್ ಪರಿಶೀಲನಾ ಸ್ಥಳಗಳು, ಬಂದೊಬಸ್ತ ಬಗ್ಗೆ ಸಭೆಯಲ್ಲಿ ವಿವರಿಸಿದರು.
 
ಸಭೆಯಲ್ಲಿ ವಿವಿಧ ಚುನಾವಣಾ ಕರ್ತವ್ಯಗಳ ನೊಡಲ್ ಅಧಿಕಾರಿಗಳಾದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಸಂತೋಷ ಬಿರಾದಾರ, ಸ್ಮಾರ್ಟ ಸಿಟಿ ಜಂಟಿ ವ್ಯವಸ್ಥಾಪಕ ಅಜೀಜ್ ದೇಸಾಯಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ.ಬಿ ಹಾಗೂ ಭಾರತೀಯ ಜನತಾ ಪಕ್ಷ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿವಿಧ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.
 
 
 
 
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here