ನಗರದಾದ್ಯಂದ “ಸ್ವಚ್ಛತೆಯೇ ಸೇವೆ” ಅಭಿಯಾನ

0
466
Share this Article
0
(0)
Views: 392

ಸ್ವಚ್ಛ ಭಾರತ ಅಭಿಯಾನದ ಕಾರ್ಯಕ್ರಮದಡಿ ಬಿಬಿಎಂಪಿ ವತಿಯಿಂದ “ಸ್ವಚ್ಛತೆಯೇ ಸೇವೆ-2024”(ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ) ಅಭಿಯಾನವನ್ನು ನಗರದಾದ್ಯಂತ ಹಮ್ಮಿಕೊಳ್ಳಲಾಗಿದೆ. 

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ತಮ್ಮ 155ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಅವರು ದ್ಯೇಯವಾಗಿದ್ದ ಸ್ವಚ್ಛತೆಯ ಹಾದಿಯಲ್ಲಿ ನಡೆದ ಗೌರವಾರ್ಥವಾಗಿ, ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ

 ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ನಗರದ ನಾಗರೀಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾಲಿಕೆ ಅಧಿಕಾರಿ/ಸಿಬ್ಬಂದಿಗಳು, ಮಾರ್ಷಲ್‌ಗಳು, ಪೌರಕಾರ್ಮಿಕರು, ಎನ್‌ಜಿಒಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಸೇರಿದಂತೆ ಇನ್ನಿತರೆ ಸಂಸ್ಥೆಗಳ ಜೊತೆಗೆ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಅದರ ಜೊತೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ.

*ಸ್ವಚ್ಛತಾ ಶ್ರಮದಾನ ಆಯೋಜನೆ:*

 ಪಾಲಿಕೆ ಎಲ್ಲಾ ವಲಯಗಳಲ್ಲಿಯೂ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ರವರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ, ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

*ಬ್ಲಾಕ್ ಸ್ಪಾಟ್‌ಗಳ ತೆರವು:*

ನಗರದ ರಸ್ತೆ ಬದಿ, ಪಾದಚಾರಿ ಮಾರ್ಗಗಳಲ್ಲಿ ಕಸ ಎಸೆದು ಬ್ಲಾಕ್ ಸ್ಪಾಟ್ ಆಗಿರುವ ಸ್ಥಳಗಳನ್ನು ಸ್ವಚ್ಛ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ, ಹೂ ಕುಂಡಗಳನ್ನಿಟ್ಟು, ಗೋಡೆಗಳಿಗೆ ಬಣ್ಣ ಬಳಿದು ಮತ್ತೆ ಆ ಸ್ಥಳದಲ್ಲಿ ಕಸ ಹಾಕದಂತೆ ಜಾಗೃತಿ ಮೂಡಿಸಲಾಗುತ್ತಿದೆ. 

*ಸ್ವಚ್ಛತಾ ಪ್ರತಿಜ್ಞೆ ಸ್ವೀಕಾರ:*

 ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳುತ್ತಿರುವ ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಎಲ್ಲಾ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ತಿಳುವಳಿಕೆ ನೀಡಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಗುತ್ತಿದೆ. 

*55 ಟನ್ ತ್ಯಾಜ್ಯ ಸಂಗ್ರಹ:*

ನಗರದಾದ್ಯಂದ 14.09.2024 ರಿಂದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಎಲ್ಲಾ ಕಡೆ ಸಕ್ರಿಯವಾಗಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಗುತ್ತಿದೆ. ಅದರಂತೆ 55 ಕಿಲೋಮೀಟರ್ ರಸ್ತೆಗಳು ಮತ್ತು ಇತರೆ ಸ್ಥಳಗಳನ್ನು ಸ್ವಚ್ಛಗೊಳಿಸುವ ಸ್ಥಳಗಳಿಂದ ಸುಮಾರು 50 ಟನ್ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ. 

*ಸ್ವಚ್ಛ ಬೆಂಗಳೂರಿಗಾಗಿ ಪ್ರತಿಜ್ಞೆ ಸ್ವೀಕರಿಸಿ:*

ನಗರದ ಎಲ್ಲಾ ನಾಗರೀಕರು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆಯ ಜೊತೆ ಎಲ್ಲರೂ ಕೈ ಜೋಡಿಸಬೇಕು. ಈ ನಿಟ್ಟಿನಲ್ಲಿ ಸ್ವಚ್ಛತಾ ಬೆಂಗಳೂರಿಗಾಗಿ ನಾಗರೀಕರು https://cleanblr.bbmp.gov.in/pledge.php ಲಿಂಕ್ ಗೆ ಭೇಟಿ ನೀಡುವ ಮೂಲಕ ಸ್ವಚ್ಛತಾ ಪ್ರತಿಜ್ಙೆಯನ್ನು ಸ್ವೀಕರಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here