ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಕಾಲಮಿತಿಯೊಳಗಾಗಿ ವಿಲೇವಾರಿ: ಮುನೀಶ್ ಮೌದ್ಗಿಲ್

0
23
Share this Article
0
(0)
Views: 3

ಬೆಂಗಳೂರು: ಡಿ.12:

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ತಿಳಿಸಿದರು.

ನಗರದಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳಿಗೆ ಸಂಬಂಧಿಸಿದಂತೆ ಇದುವರೆಗೆ ಬಂದಿದ್ದ 46,962 ಅರ್ಜಿಗಳ ಪೈಕಿ ಈಗಾಗಲೇ 39,784 ಅರ್ಜಿಗಳಿಗೆ ಅನುಮೋದನೆ ನೀಡಿ ಅಂತಿಮ ಇ-ಖಾತಾ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ‌ 2311 ಇ-ಖಾತಾ ನೀಡಲಾಗಿದ್ದು, ಬಂದಿರುವ ಅರ್ಜಿಗಳ ಪೈಕಿ ಈಗಾಗಲೇ ಶೇ. 90 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಎಲ್ಲಾ ವಲಯಗಳಲ್ಲಿ ಬಾಕಿಯಿರುವ ಅರ್ಜಿಗಳನ್ನು 2/3 ದಿನಗಳಲ್ಲಿ ವಿಲೇ ಮಾಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಪಾಲಿಕೆ ಎಂಟೂ ವಲಯಗಳಲ್ಲಿ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳು ಹಾಗೂ ಹೆಚ್ಚುವರಿ ವಿಷಯ ನಿರ್ವಾಹಕರ ಲಾಗಿನ್ ಗಳನ್ನು ಸೃಜಿಸಲಾಗಿದೆ. ಇದರ ಮೂಲಕ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಜನರಿಗೆ ಅತಿ ಶೀಘ್ರದಲ್ಲಿ ಅಂತಿಮ ಇ-ಖಾತಾ ವಿತರಿಸಲಾಗುವುದೆಂದು ಹೇಳಿದರು.

ದೂರುಗಳಿಗೆ ಸರಿಯಾಗಿ ಸ್ಪಂಧನೆ:

ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕ ಸಹಾಯವಾಣಿ ಸಂಖ್ಯೆಯನ್ನು ತೆರೆಯಲಾಗಿದೆ. ಯಾವುದೇ ನಾಗರೀಕರು ಸಹಾಯವಾಣಿ ಸಂಖ್ಯೆಯಾದ 9480683695 ಗೆ ಕರೆ ಮಾಡಿ ನೀಡುವ ದೂರುಗಳನ್ನು ಪರಿಗಣಿಸಿ ಕೂಡಲೆ ಬಗೆಹರಿಸುವ ಕಾರ್ಯ ಮಾಡಲಾಗುವುದು. ಇ-ಖಾತಾ ವಿಚಾರವಾಗಿ ಯಾವುದೇ ಗೊಂದಲಗಳಿದ್ದರೂ ಸಹಾಯವಾಣಿ ಸಂಖ್ಯೆ ಕರೆ ಮಾಡಬಹುದಾಗಿದೆ.

 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here