ಬೆಂಗಳೂರು, ಜೂನ್ 28
ಕರ್ನಾಟಕ ಲೋಕಸೇವಾ ಆಯೋಗವು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022 ರನ್ವಯ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್‍ಪಿಸಿ) ಮತ್ತು 06 (ಹೈ.ಕ.) ಹುದ್ದೆಗಳ ನೇಮಕಾತಿ ಸಂಬಂಧ 2024ನೇ ಮಾರ್ಚ್ 14 ರಂದು ವೃಂದವಾರು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಿ ಆನ್‍ಲೈನ್ ಮುಖಾಂತರ 2024ನೇ ಮೇ 30 ರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು Have you passed Kannada Language Test? ಕಾಲಂನಲ್ಲಿ ಓo ಎಂದು ನಮೂದಿಸಿದಲ್ಲಿ ಮೋಟಾರು ವಾಹನ ನಿರೀಕ್ಷಕರು 70 + 06 (ಹೈಕ) ಹುದ್ದೆಗಳ ನೇಮಕಾತಿ ಸಂಬಂಧ ನಡೆಸುವ ಕನ್ನಡ ಭಾμÁ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.