ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 06
ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತಿ ವತಿಯಿಂದ 2024-25 ನೇ ಸಾಲಿಗೆ ವಿವಿಧ ಸೌಲಭ್ಯಗಳಡಿಯಲ್ಲಿ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(Gowda)/ಗೌಡ(gouda), ಹಳ್ಳಿಕಾರ್, ಕುಂಚಿಟಿಗ ಗೌಡ ಕಾಪು, ಹೆಗ್ಗಡೆ, ಕಮ್ಮು, ರೆಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ನ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬಹುದು ಹಾಗೂ ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ https://www.kaushalkar.com ದಲ್ಲಿ ಆಗಸ್ಟ್ 30 ರೊಳಗೆ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ), ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು ಉತ್ತರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ: 080-23539601 ಅಥವಾ ನಿಗಮದ ವೆಬ್ ಸೈಟ್: https://kvcdc.karnataka.gov.in ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತಿಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ