“ಸಖಿ” ಯೊಜನೆಯಡಿ ವಿವಿಧ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರ ಮೇಲೆ  ಅರ್ಜಿ ಆಹ್ವಾನ

0
46
Share this Article
0
(0)
Views: 6

ಬೆಂಗಳೂರು ನಗರ ಜಿಲ್ಲೆ, ಜೂನ್ 19: 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ  “ಸಖಿ” (ಒನ್ ಸ್ಟಾಪ್ ಸೆಂಟರ್) ಯೋಜನೆಯಡಿ ಹೊರ ಗುತ್ತಿಗೆ ಆಧಾರ ಮೇಲೆ  ಘಟಕ ಆಡಳಿತಾಧಿಕಾರಿಗಳು 02 ಹುದ್ದೆ, ಆಪ್ತ ಸಮಾಲೋಚಕರ  03 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್  07 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 06 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ  07 ಹುದ್ದೆಗೆ ಆಯ್ಕೆ ಮಾಡಲು  ಅರ್ಹ ಮಹಿಳಾ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

          ವಿದ್ಯಾರ್ಹತೆ :  ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ  ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು  ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್  ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 05 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ  ಪ್ರವೀಣ್ಯತೆ ಹೊಂದಿರಬೇಕು. ಸ್ಥಳೀಯ ಭಾಷೆ  ಮತ್ತು ಆಂಗ್ಲ ಭಾಷೆಯಲ್ಲಿ ಪ್ರವೀಣ್ಯತೆ ಹೊಂದಿರಬೇಕು. 24/7 ಹುದ್ದೆಯಾಗಿರುತ್ತದೆ.  (Residential Staff).  ಆಪ್ತ ಸಮಾಲೋಚಕರ  ಹುದ್ದೆಗೆ  ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್  ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ  ಪ್ರವೀಣ್ಯತೆ ಹೊಂದಿರಬೇಕು.

          ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್  ಹುದ್ದೆಗೆ  ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 02 ವರ್ಷಗಳ  ಸಮಾಜ ಕಾರ್ಯ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ  ಪ್ರವೀಣ್ಯತೆ ಹೊಂದಿರಬೇಕು. ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು. ಕಾನೂನು ಸೇವೆಯಲ್ಲಿ  02 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ  ಭಾಷೆ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ  (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ  ವಿದ್ಯಾರ್ಹತೆ  ಹೊಂದಿದ್ದು, ಸಂಬಂಧಿಸಿದ ಅನುಭವ ಹೊಂದಿರಬೇಕು. ವಯೋಮಿತಿ : 18 ರಿಂದ 45 ವರ್ಷ ಒಳಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಅದ್ಯತೆ ನೀಡಲಾಗುವುದು.

          ಆಸಕ್ತ ಮಹಿಳಾ ಅಭ್ಯರ್ಥಿಗಳು  ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರ (Resume) ಅನ್ನು ಎಲ್ಲಾ ದಾಖಲೆಗಳೊಂದಿಗೆ ಜೂನ್ 30 ರೊಳಗೆ ಸಲ್ಲಿಸಬಹುದು.

           ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-26578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here