ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವುದು ಕಡ್ಡಾಯ – ಮುಖ್ಯಮಂತ್ರಿ ಸಿದ್ದರಾಮಯ್ಯ

0
37
Share this Article
0
(0)
Views: 1

ಬೆಂಗಳೂರು, ಜುಲೈ 06 

     ಪ್ರತಿ ಜಿಲ್ಲೆಯ ಎಸ್‍ಪಿ-ಡಿಜಿಪಿ-ಐಜಿಗಳು ಮತ್ತು ಪೊಲೀಸ್ ಕಮೀಷನರ್‍ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರತಿ ಠಾಣೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ಮಾಡುವುದರ ಜೊತೆಗೆ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕೆಂದು ಪೋಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ಮನಸ್ಸು ಮಾಡಿದರೆ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಪೊಲೀಸರು ಮತ್ತು ತನಿಖಾದಳವರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಗಿದೆ.

ಪೊಲೀಸರು ಯಾವ ಕಾರಣಕ್ಕೂ ರಿಯಲ್ ಎಸ್ಟೇಟ್ ಏಜೆನ್ಸಿ ಅವರ ಜೊತೆ ಕೈಜೋಡಿಸಬಾರದು. ಈ ವಿಷಯ ಗೊತ್ತಾದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಯಾವುದೇ ವಿಚಾರದ ಬಗ್ಗೆ ಮಾಹಿತಿ ಬಂದರೆ ಅದನ್ನು ಅನುಸರಣೆ ಮಾಡಬೇಕು. ಆಗ ಮುಂದೆ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಬಹುದು ಎಂದು ಉದಾಹರಣೆ ಸಹಿತ ಅಧಿಕಾರಿಗಳಿಗೆ ತಿಳಿಯಪಡಿಸಲಾಗಿದೆ ಎಂದರು.

 ಪೊಲೀಸರು ಶಿಸ್ತನ್ನು ಅಳವಡಿಸಿಕೊಂಡು ಸಂವಿಧಾನದಡಿ ಕಾರ್ಯ ನಿರ್ವಹಿಸಬೇಕು, ಯಾವುದೇ ಕೋಮುವಾದ ಕೆಲಸ ಮಾಡಬಾರದು. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸೃಷ್ಟಿಯಾದರೆ ಉತ್ಪಾದನೆ ಸೃಜನೆಯಾಗುತ್ತದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಕರ್ನಾಟಕ ಪೊಲೀಸ್‍ಗೆ ವಿಶಿಷ್ಟ ಸ್ಥಾನವಿದ್ದು ಅದಕ್ಕೆ ಕಳಂಕ ತರದಂತೆ ಕರ್ತವ್ಯನಿರ್ವಹಿಸಬೇಕು. ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರು ಜಾಸ್ತಿಯಾಗಿದ್ದು, ಇದನ್ನು ನಿಯಂತ್ರಿಸುವ ಕೆಲಸ ಮಾಡಬೇಕು. ಇದರಿಂದ ಸಮಾಜಕ್ಕೆ ಕಂಟಕವಾಗುತ್ತದೆ. ಸೌಹಾರ್ದತೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ಯಾಕ್ಟ್ ಚೆಕ್ ಘಟಕಗಳನ್ನು ಸ್ಥಾಪಿಸಿದ್ದರು ಸಹ ಸುಳ್ಳುಸುದ್ದಿಗಳು ಹೆಚ್ಚಾಗುತ್ತಿವೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ಡ್ರಗ್ಸ್ ವ್ಯಾಪಾರದಲ್ಲಿ ಭಾಗಿಯಾಗಿರುವವರನ್ನು ನಿಯಂತ್ರಣ ಮಾಡಲು ಸೂಚಿಸಲಾಗಿದೆ. ಸಮಾಜದಲ್ಲಿ ಹೊಸ ರೂಪದಲ್ಲಿ ಅಪರಾದಗಳು ಹುಟ್ಟಿಕೊಳ್ಳುತ್ತವೆ. ಇವುಗಳನ್ನು ಕೆಲವು ತಂತ್ರಜ್ಞಾನಗಳಿಂದ ಹಾಗೂ ತರಬೇತಿ ನೀಡುವುದರಿಂದ ಇವುಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿದ್ದು, ಜನಸಂದಣಿ ಹಾಗೂ ನಿರ್ಜನ ಪ್ರದೇಶಗಳಲ್ಲಿ ಇ- ಬೀಟ್ ವ್ಯವಸ್ಥೆ ಹೆಚ್ಚಿಸುವುದರ ಜೊತೆಗೆ ಪೊಲೀಸರು ಸಮವಸ್ತ್ರದಲ್ಲಿ ಇರಬೇಕು. ಆದಷ್ಟೂ ಅಪರಾಧಗಳು ಕಡಿಮೆಯಾಗುವಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆ, ಪ್ರಾಣ ರಕ್ಷಣೆ, ಅವರಿಗೆ ಸುರಕ್ಷಿತವಾದ ವ್ಯವಸ್ಥೆ, ನಿರ್ಭಯವಾಗಿ ಜೀವಿಸುವಂತಹ ವಾತಾವರಣ ನಿರ್ಮಾಣ ಮಾಡಬೇಕಾಗಿರುವುದು ಪೊಲೀಸರ ಕರ್ತವ್ಯ. ತಾವು ಒಳ್ಳೆಯ ಕೆಲಸ ಮಾಡಿದರೆ ಸರ್ಕಾರಕ್ಕೆ ಜನರಲ್ಲಿ ಉತ್ತಮ ಅಭಿಪ್ರಾಯ ಮೂಡುತ್ತದೆ. ಕರ್ತವ್ಯ ಲೋಪ ಮಾಡಿದರೆ ನಾನು ಸಹಿಸುವುದಿಲ್ಲ ಎಂದು ಸೂಚಿಸಲಾಗಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೋಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಅವರುಗಳು ಉಪಸ್ಥಿತರಿದ್ದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here