ಬೆಂಗಳೂರು ಆಗಸ್ಟ್. 6
ಕರ್ನಾಟಕ ಸರ್ಕಾರ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕಾವೇರಿ ಹ್ಯಾಂಡ್‍ಲೂಮ್ಸ್ ನೇಕಾರರ ಸೇವಾ ಕೇಂದ್ರ ಮತ್ತು ಎಫ್.ಐ.ಸಿ.ಸಿ.ಐ- ಎಫ್.ಎಲ್.ಓ ವತಿಯಿಂದ 10ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ 2024 ಹಾಗೂ ಕೈಮಗ್ಗ ನೇಕಾರರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಜವಳಿ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಗಸ್ಟ್ 07 ರಂದು ಬೆಳಿಗ್ಗೆ 11.30 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಹಣಕಾಸು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಮಾನ್ಯ ಕೇಂದ್ರ ಸಚಿವರು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರಾದ ಪ್ರಹ್ಲಾದ ಜೋಶಿ, ಮಾನ್ಯ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಕು|| ಶೋಭಾ ಕರಂದ್ಲಾಜೆ, ಮಾನ್ಯ ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹಾಗೂ ಮಾನ್ಯ ಕೇಂದ್ರ ಬಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ಮಾನ್ಯ ಕೇಂದ್ರ ರಾಜ್ಯ ಸಚಿವರು, ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದ ಸಚಿವರಾದ ವಿ. ಸೋಮಣ್ಣ ಅವರು ಗೌರವಾನ್ವಿತ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್‍ನ ಮಾನ್ಯ ಸಭಾಪತಿಗಳಾದ ಬಸವರಾಜು ಎಸ್. ಹೊರಟ್ಟಿ, ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ. ಎಸ್. ಪಾಟೀಲ ಘನ ಉಪಸ್ಥಿತಿಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು.
ಭಾರತದ ಕೈಮಗ್ಗ ನೇಕಾರಿಕೆಗೆ ವಿಶೇಷ ಸ್ಥಾನವಿದೆ. ದೇಶದ ಒಟ್ಟು ಬಟ್ಟೆ ಉತ್ಪಾದನೆಯಲ್ಲಿ ಶೇಕಡ 15 ರಷ್ಟು ಕೈಮಗ್ಗ ಕ್ಷೇತ್ರದಿಂದ ಆಗುತ್ತಿದೆ ಹಾಗೂ ಜಗತ್ತಿನಲ್ಲಿ ಉತ್ಪಾದನೆಯಾಗುವ ಒಟ್ಟು ಕೈಮಗ್ಗ ಉತ್ಪನ್ನಗಳಲ್ಲಿ ಶೇಕಡ 95 ರಷ್ಟು ಉತ್ಪನ್ನಗಳು ಭಾರತದಲ್ಲೇ ಉತ್ಪಾದನೆಯಾಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ.
ಕೈಮಗ್ಗ ನೇಕಾರಿಕೆ ಮತ್ತು ಕೈಮಗ್ಗ ಉದ್ದಿಮೆಯ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಕೇಂದ್ರ ಸರ್ಕಾರವು ಜುಲೈ 2015 ರಲ್ಲಿ ಆಗಸ್ಟ್ 7 ನೇ ದಿನವನ್ನು ರಾಷ್ಟ್ರೀಯ ಕೈಮಗ್ಗ ದಿನವನ್ನಾಗಿ ಘೋಷಿಸಲಾಯಿತು. ಅದರಂತೆ, ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಆಶ್ರಯದಲ್ಲಿ ಈ ದಿನ 07-08-2024 ರಂದು 10ನೇ ರಾಷ್ಟ್ರೀಯ ಕೈಮಗ್ಗ ದಿನವನ್ನಾಗಿ ಆಚರಿಸಲಾಗುತ್ತಿದೆ.
ರಾಜ್ಯದಲ್ಲಿ 54,791 ಕೈಮಗ್ಗ ನೇಕಾರರಿದ್ದು 29,377 ಕೈಮಗ್ಗಗಳಲ್ಲಿ ಹತ್ತಿ ಬಟ್ಟೆಗಳು, ರೇಷ್ಮೆ ಸೀರೆಗಳು, ಇಳಕಲ್ ಸೀರೆಗಳು, ಟವಲ್, ಲುಂಗಿ ಬೆಡ್ ಶೀಟ್ ಇತ್ಯಾದಿ ಉತ್ಪನ್ನಗಳನ್ನು ಉತ್ಪಾದಿಸಲಾಗುತ್ತಿದೆ