ಹೆಚ್ಚಿದ ಕ್ರಿಕೆಟ್ ಜವಾಬ್ದಾರಿಗಳು: ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದ ಗಂಭೀರ್

0
49
Share this Article
0
(0)
Views: 1

ಹೆಚ್ಚಿದ ಕ್ರಿಕೆಟ್ ಜವಾಬ್ದಾರಿಗಳು: ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದ ಗಂಭೀರ್

ತಮ್ಮನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಕೋರಿ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ.

ಇನ್ನೇನು ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವ ಹೊತ್ತಿನಲ್ಲೇ ಈ ನಿರ್ಧಾರ ಕೈಗೊಂಡಿದ್ದಾರೆ. ಸದ್ಯ ಗಂಭೀರ್ ಅವರು ಪೂರ್ವ ದೆಹಲಿ ಸಂಸದರಾಗಿದ್ದಾರೆ.

“ಮುಂದಿನ ಕ್ರಿಕೆಟ್ ಬದ್ಧತೆಗಳಿಗೆ ಹೆಚ್ಚು ಗಮನ ಹರಿಸಬೇಕಾಗಿರುವುದರಿಂದ ನನ್ನನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಪಕ್ಷದ ಗೌರವಾನ್ವಿತ ಅಧ್ಯಕ್ಷ  ಜೆ ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಜನರ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಾರತ ತಂಡದ ಮಾಜಿ ಕ್ರಿಕೆಟಿಗರಾಗಿರುವ ಗಂಭೀರ್, 2007ರಲ್ಲಿ ಟಿ20 ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದರು.

ಟೀಂ ಇಂಡಿಯಾ ಪರ 147 ಏಕದಿನ, 58 ಟೆಸ್ಟ್ ಹಾಗೂ 37 ಟಿ20 ಪಂದ್ಯಗಳಲ್ಲಿ ಆಡಿರುವ ಅವರು, ಕ್ರಮವಾಗಿ 5,238 ರನ್, 4,154 ರನ್ ಹಾಗೂ 932 ರನ್ ಕಲೆಹಾಕಿದ್ದಾರೆ. 154 ಐಪಿಎಲ್ ಪಂ ದ್ಯಗಳಿಂ ದ 4,218 ರನ್ ಗಳಿಸಿದ್ದಾರೆ.

ಕೋಲ್ಕತ್ತ ನೈಟ್ ರೈಡರ್ಸ್‌ ತಂಡ ಗಂಭಿರ್ ನಾಯಕತ್ವದಲ್ಲಿ 2012 ಹಾಗೂ 2014ರಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಅವರು ಇದೀಗ ಮತ್ತೆ, ಕೆಕೆಆರ್ ತಂಡದ ಮೆಂಟರ್ ಆಗಿ ನೇಮಕಗೊಂಡಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here