ಬೆಂಗಳೂರು ನಗರ ಜಿಲ್ಲೆ, ಜೂನ್ 15:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ದಕ್ಷಿಣ ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳ ಬಗ್ಗೆ ಅರಿವಿರುವ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಎರಡು ಅಧಿಕಾರೇತರ ಸದಸ್ಯರನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ ಎನ್.ಜಿ.ಓ ರೊಂದಿಗೆ ಸಂಪರ್ಕ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಇಬ್ಬರ ಸದ್ಯಸರನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಜಾತಿ ಪ್ರಮಾಣ, ಆಧಾರ್ ಪ್ರತಿ ಮತ್ತು ಇತ್ಯಾಧಿ ವಿವರಗಳೊಂದಿಗೆ ಅರ್ಜಿಯನ್ನು ಜುಲೈ 03 ರೊಳಗೆ ಸಲ್ಲಿಸಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್ ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬೆಂಗಳೂರು-07 ಅಥವಾ ದೂರವಾಣಿ ಸಂಖ್ಯೆ: 080-26711096 ಗೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.