ಬಳ್ಳಾರಿ,ಜೂ.01:
ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 05 ರಂದು ಕೌನ್ಸಿಲಿಂಗ್ ಪ್ರಕ್ರಿಯೆ ನಿಗದಿಯಾಗಿತ್ತು, ಕಾರಣಾಂತರಗಳಿಂದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೊಳಗಲ್ಲು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯ ಪ್ರಾಂಶುಪಾಲರ ಮೊ.7353346069, ಸಂಡೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9113280239 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.