ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಹಾಗೂ ಆತಂಕ ಪಡಬಾರದು
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಿಂದ ಸ್ಪಷ್ಠೀಕರಣ
ಬೆಂಗಳೂರು, ನವೆಂಬರ್ 28:
2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು.
ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.