Views: 0
ಮಡಿಕೇರಿ ಮೇ.28:-
ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ 2023-24ನೇ ಸಾಲಿನ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆ ಸಮಾರೋಪ ಹಾಗೂ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಮೇ, 30 ರಂದು ಬೆಳಗ್ಗೆ 11 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ.ಜವರಪ್ಪ, ನಿವೃತ್ತ ಪ್ರಾಧ್ಯಾಪಕರಾದ ಕೆ.ಕೆ.ಮಹೇಶ, ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಡಿ.ಕೆ.ಸರಸ್ವತಿ, ಐಕ್ಯೂಎಸಿ ಸಂಚಾಲಕರು ಆಂಗ್ಲ ಭಾಷಾ ವಿಭಾಗದ ಸಹ ಪ್ರಾಧ್ಯಾಪಕರಾದ ಎನ್.ಪಿ.ಸತೀಶ್ ಇತರರು ಪಾಲ್ಗೊಳ್ಳಲಿದ್ದಾರೆ.