ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

0
46
Share this Article
0
(0)
Views: 0
 
 
 
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01:-
 
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.
 
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಲು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳು ಸಮರ್ಪಕವಾಗಿ ಲಭ್ಯವಾಗುವಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಮಾರಾಟ ಕೇಂದ್ರಗಳಲ್ಲಿ ಶೇಖರಿಸಿಡಬೇಕು. ಕೃಷಿ ಪರಿಕರಗಳನ್ನು ಮಾರಾಟ ಮಾಡುವ ಅಂಗಡಿಗಳು ಕಡ್ಡಾಯವಾಗಿ ಪರಿಕರಗಳ ಬೆಲೆ ವಿವರಗಳನ್ನು ಅಂಗಡಿ ಮುಂದೆ ಪ್ರದರ್ಶಿಸಿರಬೇಕು. ರೈತರು ಖರೀದಿಸಲು ಬಂದಾಗ ವಿಳಂಬ ಮಾಡದೆ ನಿಗದಿತ ಸಮಯದಲ್ಲಿ ಅವಶ್ಯಕತೆ ಇರುವ ಕೃಷಿ ಪರಿಕರಗಳನ್ನು ನೀಡಬೇಕು.
 
ಕಳಪೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅನಧಿಕೃತವಾಗಿ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
 
2024-25 ನೇ ಸಾಲಿಗೆ 69,559 ಹೆಕ್ಟೇರ್ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದ್ದು, 1,42,292 ಮೆಟ್ರಿಕ್ ಟನ್ ಮುಂಗಾರು ಉತ್ಪಾದನೆ ಗುರಿ ಹೊಂದಲಾಗಿದೆ. ಪ್ರಸಕ್ತ ವರ್ಷದಲ್ಲಿ 3,837 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು ಇಲ್ಲಿಯವರೆಗೆ 737.6 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ಮುಂಗಾರು ಹಂಗಾಮಿನಲ್ಲಿ 31,842 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು ಜುಲೈ ಅಂತ್ಯಕ್ಕೆ 10,353 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ.2023-24 ನೇ ಸಾಲಿನಲ್ಲಿ ರಸಗೊಬ್ಬರ ಮತ್ತು ಕೀಟನಾಶಕಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 8 ಮಳಿಗೆಗಳ ಮೇಲೆ ದಾಳಿ ನಡೆಸಿ ಮಳಿಗೆಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ ಅವರು ಮಾಹಿತಿ ನೀಡಿದರು.
 
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪನಿರ್ದೇಶಕಿ ಗಾಯಿತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ ಜೆ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕ ಕಂಪನಿಗಳ ಮುಖ್ಯಸ್ಥರು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
 
 
 
 
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here