ಮೈಸೂರು ರಂಗಾಯಣ: ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ

0
68
Share this Article
0
(0)
Views: 0

ಶಿವಮೊಗ್ಗ ಜೂನ್ 04:

ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 

2024-25ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000/-ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.  

ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ದಿನಾಂಕ: 05-06-2024ರಿಂದ ರಂಗಾಯಣದ ವೆಬ್‍ಸೈಟ್ http://rangayanamysore.karnataka.gov.xn--in-2vh3ba2fue/ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230/-, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180/-ಗಳು (ರಂಗಕೈಪಿಡಿ ಶುಲ್ಕ ರೂ.30/- ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 20 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು. 

ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುವುದು. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ. 

ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ:0821-2512639, 9148827720 ನ್ನು ಸಂಪರ್ಕಿಸುವುದು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here