ಬೆಂಗಳೂರು, ಜೂನ್ 05:
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿ.ಟಿ.ಟಿ.ಸಿ) ಖಾಲಿ ಇರುವ ವಿವಿಧ ಉಳಿಕೆ ಮೂಲ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧವಾಗಿ 2024ನೇ ಏಪ್ರಿಲ್ 3 ರಂದು ಪ್ರಕಟಿಸಲಾದ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಕೆಲವು ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ 2024ನೇ ಮೇ 9 ರಂದು ಪರಿಷ್ಕøತ ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿನ ವಿವಿಧ ಮೂಲ ವೃಂದಗಳಲ್ಲಿನ ಒಟ್ಟು 98 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ, ವೇತನ ಶ್ರೇಣಿ, ಅಭ್ಯರ್ಥಿಗಳ ಅರ್ಹತೆ ವಿವರ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿಯ ವಿಧಾನ ಹಾಗೂ ಪ್ರವರ್ಗವಾರು ಹುದ್ದೆಗಳ ವಿವರಗಳ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧೀಕಾರ (ಕೆಇಎ) ಜಾಲತಾಣ http://kea.kar.nic.in ಗೆ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಉಪ ಪ್ರಧಾನ ವ್ಯವ್ಥಾಪಕರು(ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.