ಅನಧಿಕೃತವಾಗಿ ಪ್ರಯಾಣ ಮಾಡಿದ ಪ್ರಯಾಣಿಕರಿಂದ ದಂಡ ವಸೂಲಿ

0
43
Share this Article
0
(0)
Views: 0

ಬೆಂಗಳೂರು, ಜೂನ್ 10:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಏಪ್ರಿಲ್-2024 ರ ಮಾಹೆಯಲ್ಲಿ ಒಟ್ಟು 19,146 ಟ್ರಿಪ್‍ಗಳನ್ನು ತಪಾಸಿಸಿ 3924 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,95,540/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1023 ಪ್ರಕರಣಗಳನ್ನು ದಾಖಲಿಸಿದೆ.

 ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 489 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 48,900/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ.

 ಒಟ್ಟಾರೆಯಾಗಿ ಏಪ್ರಿಲ್-2024 ರ ಮಾಹೆಯಲ್ಲಿ 4,413 ಪ್ರಯಾಣಿಕರಿಂದ ಒಟ್ಟು ರೂ. 8,44,440/- ದಂಡವನ್ನು ವಸೂಲಿ ಮಾಡಲಾಗಿದೆ.

 ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ / ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಪ್ರಕಟಣೆ ತಿಳಿಸಿದೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here