ಬೆಂಗಳೂರು, ಜೂನ್ 11:
ಶೋರಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ರಾಜಾ ವೇಣುಗೋಪಾಲ ನಾಯಕ ಅವರು ವಿಧಾನ ಸೌಧದ ಮೊದಲನೇಯ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ನೂತನ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಅವರಿಗೆ ಪ್ರಮಾಣವಚನ ಬೋಧಿಸಿ, ಅಭಿನಂದನೆ ಸಲ್ಲಿಸಿದರು.
ಈ ವೇಳೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಧಿಮೆ ಸಚಿವರಾದ ಶರಣಬಸಪ್ಪ ದರ್ಶನಾಪುರ, ಶಾಸಕರುಗಳಾದ ಬಿ.ಬಿ. ಚಿಮ್ಮನಕಟ್ಟೆ, ಅಲ್ಲಮ ಪ್ರಭು ಪಾಟೀಲ್, ಜಗದೇವ ಗುತ್ತೇದಾರ್, ಸಂಸದರಾದ ಕುಮಾರ್ ನಾಯಕ್, ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.