ಜಲಮಂಡಳಿಯಲ್ಲಿ ಬಸವಜಯಂತಿ ಆಚರಣೆ
ಬೆಂಗಳೂರು ಜೂನ್ 12:
ಬಸವಣ್ಣನವರ ಕಾಯಕ ತತ್ವದಂತೆ ಎಲ್ಲರಿಗೂ ಶುದ್ದ ಕುಡಿಯುವ ನೀರನ್ನು ಒದಗಿಸುವ ಕಾಯಕದಲ್ಲಿ ನಿರತರವಾಗಿ ಶ್ರಮಿಸುತ್ತಿರುವ ಬೆಂಗಳೂರು ಜಲಮಂಡಳಿ ನೌಕರರ ಸೇವೆಯಲ್ಲಿ ಬಸವಣ್ಣನವರ ಕಾಯಕ ತತ್ವವನ್ನು ಕಾಣಬಹುದಾಗಿದೆ *ಎಂದು ಜಲಮಂಡಳಿ ಅಧ್ಯಕ್ಷರಾದ ಡಾ ವಿ ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಜಲಮಂಡಳಿಯ ಕೇಂದ್ರ ಕಚೇರಿ ಕಾವೇರಿ ಭವನದಲ್ಲಿ ಆಯೋಜಿಸಲಾಗಿದ್ದ ಆಯೋಜಿಸಲಾಗಿದ್ದ 890 ನೇ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.
ಕಾಯಕವೇ ಕೈಲಾಸ ಎಂದು ಬಸವಣ್ಣನವರು ಪ್ರತಿಪಾದಿಸಿದ್ದರು. ಮಾಡುವ ಯಾವುದೇ ಕಾರ್ಯದಲ್ಲಿ ಶೃದ್ದೆಯನ್ನು ಬೆಳೆಸಿಕೊಂಡಲ್ಲಿ ಅಂದುಕೊಂಡ ಗುರಿಯನ್ನು ತಲುಪಲು ಸಾಧ್ಯ. ಬೆಂಗಳೂರು ಜಲಮಂಡಳಿ ಇದೇ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ನೀರಿನ ಬವಣೆಯನ್ನು ಸಮರ್ಪಕವಾಗಿ ನಿಭಾಯಿಸಿದೆ. ಇದಕ್ಕೆ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಮಾರ್ಗದರ್ಶನ ಮತ್ತು ಎಲ್ಲಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಶ್ರಮ ಕಾರಣವಾಗಿದೆ. ಜಾತಿ ಭೇದವಿಲ್ಲದೇ, ಕಸುಬಿನ ಹಂಗಿಲ್ಲದೇ ಯಾವುದೇ ಭೇದಭಾವವಿಲ್ಲದೇ ಎಲ್ಲರನ್ನೂ ಒಂದಾಗಿ ಕಾಣವುದು ಮುಖ್ಯ. ಸಮಾಜದಲ್ಲಿ ಸಮಾನತೆಯನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು. ಬಸವಣ್ಣನವರ ಕಾಯಕ ತತ್ವದಂತೆ ಎಲ್ಲರಿಗೂ ಶುದ್ದ ಕುಡಿಯುವ ನೀರನ್ನು ಒದಗಿಸುವ ಕಾಯಕದಲ್ಲಿ ನಿರತರವಾಗಿ ಶ್ರಮಿಸುತ್ತಿರುವ ಬೆಂಗಳೂರು ಜಲಮಂಡಳಿ ನೌಕರರ ಸೇವೆಯಲ್ಲಿ ಬಸವಣ್ಣನವರ ಕಾಯಕ ತತ್ವವನ್ನು ಕಾಣಬಹುದಾಗಿದೆ. ಜಲಮಂಡಳಿಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ತಮ್ಮ ಕಾರ್ಯದಲ್ಲಿ ಇನ್ನಷ್ಟು ಹೆಚ್ಚಿನ ಶೃದ್ದೆಯನ್ನು ಅಳವಡಿಸಿಕೊಂಡು ಜನರ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಅಧ್ಯಕ್ಷರು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಬಸವ ಸಮಿತಿಯ ಅಧ್ಯಕ್ಷರಾದ ಶ್ರೀ ಅರವಿಂದ ಜತ್ತಿಯವರು ಮಾತನಾಡಿ, ಹೆಮ್ಮೆಯ ಕನ್ನಡಿಗನಾಗಿರುವ ಬಸವಣ್ಣನವರ ವಿಚಾರಧಾರೆಗಳನ್ನು ಒಂದು ನಾಡು ನುಡಿಗೆ ಸೀಮಿತವಾಗಿರಿಸದೇ ವಿಶ್ವಾದಾದ್ಯಂತ ಪ್ರಸಾರ ಮಾಡುವ ಕಾರ್ಯಕ್ರಮವಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ. ಷ. ಬ್ರ. ಡಾ. ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಬಸವಣ್ಣನವರ ವಚನಗಳಲ್ಲಿನ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡಲ್ಲಿ ದೇಹವೇ ದೇಗುಲವಾಗುವುದರಲ್ಲಿ ಸಂಶಯವಿಲ್ಲ ಎಂದು ತಮ್ಮ ಆಶೀರ್ವಚನದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಧರ್ಭದಲ್ಲಿ ಜಲಮಂಡಳಿ ನೌಕರರ ಸಂಘದ ಅಧ್ಯಕ್ಷರಾದ ಮರಿಯಪ್ಪ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಘದ ಅಧ್ಯಕ್ಷ ಸದಾಶಿವ ಕಾಂಬಳೆ, ಸ್ಯಾನಿಟರಿ ವರ್ಕರ್ಸ್ ಯೂನಿಯನ್ ಅಧ್ಯಕ್ಷರಾದ ಸಿದ್ದಪ್ಪ, ಮುಖ್ಯ ಆರ್ಥಿಕ ಸಲಹೆಗಾರರಾದ ಸುಬ್ಬರಾಮಯ್ಯ ಸೇರಿದಂತೆ ಮಂಡಳಿಯ ನೂರಾರು ಸಿಬ್ಬಂದಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.