ಬಳ್ಳಾರಿ,ಜೂ.19:
ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಹೆಚ್ ಸತೀಶ್ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2024-25 ನೇ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ.
ಅರ್ಹ ಪದವೀಧರರು ಜುಲೈ 31ರ ಒಳಗಾಗಿ ಇಲಾಖೆಯ ವೆಬ್‍ಸೈಟ್ www.sw.kar.nic.in ಗೆ ಭೇಟಿ ನೀಡಿ ಅರ್ಜಿಸಲ್ಲಿಸಬಹುದು.
ಹೆಚ್ಚಿನÀ ಮಾಹಿತಿಗಾಗಿ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಥವಾ ದೂ:08392267932 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.