“ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ”ದ ಕಾರ್ಯಾಚರಣೆ ಮತ್ತು ನಿರ್ವಹಣೆ”ಯ ಲೋಕಾರ್ಪಣೆ ಕಾರ್ಯಕ್ರಮ:
ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ “ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ”ದಲ್ಲಿ ಅತ್ಯಾಧುನಿಕ ತಂತ್ರಜ್ಙಾನ ಒಳಗೊಂಡ “ಕಾರ್ಯಾಚರಣೆ ಮತ್ತು ನಿರ್ವಹಣೆ”ಯ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಈ ವಿಶಿಷ್ಠ ವ್ಯವಸ್ಥೆಯನ್ನು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ದಿನೇಶ್ ಗುಂಡೂರಾವ್, ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಪಶ್ಚಿಮ ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಪ್ರಧಾನ ಅಭಿಯಂತರರಾದ ಡಾ. ಬಿ.ಎಸ್ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.