ಬೆಂಗಳೂರು ನಗರ ಜಿಲ್ಲೆ, ಜೂನ್ 24:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಆಯವ್ಯಯ ಕಂಡಿಕೆ -144 ಘೋಷಣೆಯನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು ಪಡೆಯುವ ಸಾಲಕ್ಕೆ ರೂ.2.00 ಕೋಟಿಗಳವರೆಗೆ ಸಮಾನಂತರ ಖಾತರಿ ನೀಡುವ ಯೋಜನೆಯನ್ನು ಕೆ.ಎಸ್.ಎಫ್.ಸಿ ಮಾದರಿಯಲ್ಲಿ ರಾಷ್ಟ್ರೀಕೃತ ಬ್ಯಾಂಕಗಳೂ / ಆರ್.ಆರ್.ಬಿ ಬ್ಯಾಂಕ್ ಗಳಿಗೆ ಸರ್ಕಾರವು ದಿನಾಂಕ 18.11.2023ರಲ್ಲಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ . ಆದರಂತೆ ಈ ಯೋಜನೆಯು ಉಪಯೋಗವನ್ನು ಪಡೆಯಲು ಇಚ್ಛಿಸುವ ಫಲಾನುಭಾವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಆಸಕ್ತರು ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು -57 ಅಥವಾ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ದೂರವಾಣಿ ಸಂಖ್ಯೆ : 080-22240449 ಅಥವಾ ಮೊಬೈಲ್ ಸಂಖ್ಯೆ : 9480843019., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು ದೂರವಾಣಿ ಸಂಖ್ಯೆ : 080-28461351 ಅಥವಾ ಮೊಬೈಲ್ ಸಂಖ್ಯೆ : 9480843051., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು ದೂರವಾಣಿ ಸಂಖ್ಯೆ : 080-26711096 ಅಥವಾ ಮೊಬೈಲ್ ಸಂಖ್ಯೆ : 9480843050., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು ದೂರವಾಣಿ ಸಂಖ್ಯೆ : 080-29535045 ಅಥವಾ ಮೊಬೈಲ್ ಸಂಖ್ಯೆ : 9480843049 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್ ತಾಲ್ಲೂಕು ದೂರವಾಣಿ ಸಂಖ್ಯೆ : 080-27859557 ಅಥವಾ ಮೊಬೈಲ್ ಸಂಖ್ಯೆ : 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.