ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ: ಸಿದ್ದರಾಮಯ್ಯ

0
183
Share this Article
4.5
(2)
Views: 3

ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆ‌ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಈ ಬಗ್ಗೆ ಮಾತನಾಡಿ, “ಯಾರೋ ಒಬ್ಬರು ಬ್ಯಾಗ್ ಇಟ್ಟು ಹೋಗಿರುವುದು ತಿಳಿದುಬಂದಿದೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ” ಎಂದರು.

“ಇದು ಉಗ್ರರು ಮಾಡಿರುವ ಘಟನೆಯೇ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಇದೊಂದು ಸುಧಾರಿತ ಸ್ಫೋಟಕದ ಪ್ರಕರಣವಾಗಿದೆ, ಭಾರಿ ಪ್ರಮಾಣದಲ್ಲೇನೂ ನಡೆದಿಲ್ಲ. ಸಣ್ಣ ಪ್ರಮಾಣದ್ಧಾದರೂ ಅದು ಪರಿಣಾಮಕಾರಿಯಾಗಿದೆ. ಉಗ್ರರ ಬಗ್ಗೆ ಗೊತ್ತಿಲ್ಲ” ಎಂದು ತಿಳಿಸಿದರು.

“ಇಂತಹ ಘಟನೆ ನಡೆಯಬಾರದು. ಇತ್ತೀಚೆಗೆ ಇಂಥದ್ದು ಆಗಿರಲಿಲ್ಲ. ಮಂಗಳೂರಲ್ಲಿ ಘಟನೆ ನಡೆದಿತ್ತು. ಬಿಜೆಪಿ ಸರ್ಕಾರದಲ್ಲೂ ಹಲವು ಸ್ಫೋಟಗಳು ನಡೆದಿದ್ದವು. ನಮ್ಮ ಸರ್ಕಾರದಲ್ಲಿ ಇದೇ ಮೊದಲ ಘಟನೆಯಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು” ಎಂದರು.

“ಅಲ್ಲಿ ಸ್ಫೋಟ ಆಗಿರುವುದು ಸತ್ಯವಾಗಿದೆ. ಕಾರಣವಾದವರ ವಿರುದ್ಧ ಕಠಿಣ ಕ್ರಮ ಆಗಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷದವರು ರಾಜಕಾರಣ ಮಾಡಬಾರದು, ತನಿಖೆಗೆ ಸಹಕಾರ ಕೊಡಬೇಕು. ಗಾಯಾಳುಗಳಿಗೆ ಪರಿಹಾರ ವಿಚಾರ ಈ ಕುರಿತು ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಸ್ಥಳಕ್ಕೆ ಹೋಗುವಂತೆ ಗೃಹ ಸಚಿವರಿಗೆ ಹೇಳಿದ್ದೇನೆ. ಸಂಪೂರ್ಣ ಮಾಹಿತಿ ಸಿಕ್ಕ ಮೇಲೆ ತಿಳಿಸುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ:ಪರಿಶೀಲನೆ ಅಗತ್ಯ

ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, “ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ” ಎಂದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ: ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ” ಎಂದು ತಿಳಿಸಿದರು.

How useful was this post?

Click on a star to rate it!

Average rating 4.5 / 5. Vote count: 2

No votes so far! Be the first to rate this post.

Leave a reply

Please enter your comment!
Please enter your name here