ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವ ಸಮಾರಂಭ

0
141
Share this Article
0
(0)
Views: 22

ಬೆಂಗಳೂರು, ಜೂನ್ 26:

  ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024ನೇ ಜೂನ್ 27ರಂದು ಬೆಳಿಗ್ಗೆ 10.00 ಗಂಟೆಗೆ “ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವ” ಸಮಾರಂಭವನ್ನು ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು, ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಾಹಾಸ್ವಾಮೀಜಿ ಹಾಗೂ ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಲಿರುವರು.

ಮಾನ್ಯ ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಮಾನ್ಯ ಕೇಂದ್ರ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಮಾನ್ಯ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಸಚಿವರಾದ ವಿ. ಸೋಮಣ್ಣ, ಮಾನ್ಯ ಸಭಾಪತಿಗಳಾದ ಬಸವರಾಜ್ ಎಸ್ ಹೊರಟ್ಟು ಹಾಗೂ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಪರೀಧ್ ಅವರು ಘನ ಉಪಸ್ಥಿತರಿರುವರು.

ಮಾನ್ಯ ಕಂದಾಯ ಸಚಿವರು ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಭೈರೇಗೌಡ, ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಧ್ಯಕ್ಷರಾದ ರಾಮಲಿಂಗಾರೆಡ್ಡಿ ಹಾಗೂ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಪದನಿಮಿತ್ತ ಸದಸ್ಯರಾದ ಶಿವರಾಜ ಎಸ್ ತಂಗಡಗಿ ಅವರು ಗೌರವ ಉಪಸ್ಥಿತರಿರುವರು. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು.

ಸಮಾರಂಭದ ಉದ್ಘಾಟನೆಗೂ ಮುನ್ನ ವಿವಿಧ ಭಾಗಗಳಿಂದ ಬೆಳಿಗ್ಗೆ 7.00 ಗಂಟೆಗೆ ನಾಡಪ್ರಭು ಕೆಂಪೇಗೌಡರ ಪುರಜ್ಯೋತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಗಡಿಯ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯಿಂದ ಪುರಜ್ಯೋತಿಗೆ ಚಾಲನೆ ನೀಡಲಿರುವರು. ಮಾಗಡಿ ವಿಧಾನಸಭಾ ಕ್ಷೇತ್ರ ಮಾನ್ಯ ಶಾಸಕರಾದ ಹೆಚ್.ಸಿ. ಬಾಲಕೃಷ್ಣ ಅವರು ಘನ ಉಪಸ್ಥಿತಿ ವಹಿಸಲಿರುವರು.

ಮಾನ್ಯ ವಸತಿ, ವಕ್ಫ್ ಹಾಗೂ ಅಲ್ಪಸಂಕ್ಯಾತರ ಕಲ್ಯಾಣ ಸಚಿವಾರದ ಜಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಕೆಂಪಾಂಬುಧಿ ಕೆರೆ ಗಡಿ ಗೋಪುರದಿಂದ, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಲಾಲ್‍ಬಾಗ್ ಗಡಿ ಗೋಪುರದಿಂದ, ಮಾನ್ಯ ನಗರಾಭಿವೃದ್ಧಿ ಮತ್ತು ಮತ್ತು ನಗರ ಯೋಜನೆ ಸಚಿವರಾದ ಸುರೇಶ್ ಬಿ.ಎಸ್ ಅವರು ಮೇಖ್ರಿ ವೃತ್ತ ಗಡಿ ಗೋಪುರದಿಂದ, ಮಾನ್ಯ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಹಲಸೂರು ಕೆರೆ ಗಡಿ ಗೋಪುರದಿಂದ, ಮಾನ್ಯ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಆವತಿಯ ಚೆನ್ನಕೇಶವ ದೇವಾಲಯದ ಆವರಣದಿಂದ ಹಾಗೂ ಮಾನ್ಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಹುತ್ರಿದುರ್ಗದ ಬಯಲು ಬಿಸಿಲು ಬಸವಣ್ಣನ ಸ್ಥಳದಿಂದ ಪುರಜ್ಯೋತಿಗೆ ಚಾಲನೆ ನೀಡಲಿರುವರು. ಕುಣಿಗಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಹೆಚ್.ಡಿ. ರಂಗನಾಥ್ ಅವರು ಘನ ಉಪಸ್ಥಿತಿ ವಹಿಸಲಿರುವರು.

ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಪುರಜ್ಯೋತಿ ಸ್ವೀಕರಿಸಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here