ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ “ವಿಶ್ವ ಝೂನೋಸಿಸ್ ದಿನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಣೆ ಮಾಡಲಾಯಿತು.
1885 ರ ಜುಲೈ 06 ರಂದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಟಿಕ್ ಕಾಯಿಲೆಯಾದ ರೇಬಿಸ್ ರೋಗಕ್ಕೆ ಮೊದಲು ಲಸಿಕೆಯನ್ನು ಸರ್.ಲೂಯಿಸ್ ಪಾಶ್ಚರ್ ರವರು ಯಶಸ್ವಿಯಾಗಿ ನೀಡಿದ ಸಂದರ್ಭದ ಸ್ಮರಣಾರ್ಥಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಹೇಮಾವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.