ಸನ್ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರಿಂದ ಮೊದಲ ಹಂತದ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ
“ಬ್ರ್ಯಾಂಡ್ ಬೆಂಗಳೂರು – ಸುಗಮ ಸಂಚಾರ ಬೆಂಗಳೂರು” ಪರಿಕಲ್ಪನೆಯಡಿ ಪಶ್ಚಿಮ ವಲಯ ವ್ಯಾಪ್ತಿಯ ಗಾಂಧಿ ನಗರ, ಮಲ್ಲೇಶ್ವರಂ, ಮಹಾಲಕ್ಷ್ಮೀ ಲೇಔಟ್ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲನೇ ಹಂತದ “ವೈಟ್ ಟಾಪಿಂಗ್” ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸನ್ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು.
ಈ ವೇಳೆ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ಬಿ.ಝಡ್ ಜಮೀರ್ ಅಹ್ಮದ್ ಖಾನ್, ಶ್ರೀ ದಿನೇಶ್ ಗುಂಡೂರಾವ್, ಸ್ಥಳೀಯ ಶಾಸಕರಾದ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಶ್ರೀ ಕೆ. ಗೋಪಾಲಯ್ಯ, ಆಡಳಿತಗಾರರಾದ ಶ್ರೀ ಉಮಾಶಂಕರ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ವಲಯ ಜಂಟಿ ಆಯುಕ್ತರಾದ ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.