ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ  ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

0
185
Share this Article
0
(0)
Views: 56

ಶಿವಮೊಗ್ಗ : ಆಗಸ್ಟ್ 05

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳ ನಿರುದ್ಯೋಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜ ಸಲ್ಲಿಸುವಂತಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. 

ಆಸಕ್ತರು ಸೇವಾಸಿಂಧು http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmmd.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು. 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here