ಮೈಸೂರಿನಲ್ಲಿ 600 ಕೋಟಿ ರೂ.ಗಳ ಹೊಸ ಹೂಡಿಕೆ

0
60
Share this Article
0
(0)
Views: 1

ಮೈಸೂರಿನಲ್ಲಿ 600 ಕೋಟಿ ರೂ.ಗಳ ಹೊಸ ಹೂಡಿಕೆಯೊಂದಿಗೆ ಹೊಸ ಕಂಪೆನಿಗಳ ಸ್ಥಾಪನೆ, 5000 ಉದ್ಯೋಗ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಆಗಸ್ಟ್ 06

ಕರ್ನಾಟಕ ಇಎಸ್‍ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‍ಡಿಎಂ ಕಂಪನಿಗಳು ಕ್ಲಸ್ಟರ್‍ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ಹೆಚ್ಚುವರಿಯಾಗಿ 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ, ಅμÉ್ಟೀ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ, ಈ ಎಲ್ಲಾ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಇಂದು (ಆಗಸ್ಟ್ 6) ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಇಂಡಿಯಾ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಕೆಡಿಇಎಂ) ಸಹಯೋಗದಲ್ಲಿ 4ನೇ ಆವೃತ್ತಿ ಅನಾವರಣಗೊಳಿಸುತ್ತಿರುವ ಸಂದರ್ಭದಲ್ಲಿ ನೀಡಿರುವ ಸಂದೇಶದಲ್ಲಿ ಸಚಿವರು ಮೈಸೂರನ್ನು ಉದ್ಯೋಗಶೀಲ ನಗರವನ್ನಾಗಿ ವರ್ಧಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ ಎಂದು ತಿಳಿಸಿದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here