ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ

0
48
Share this Article
0
(0)
Views: 2
 

 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 12:-

ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ಹೊಸಕೋಟೆ ಟೌನ್ ಹಾಗೂ ದೊಡ್ಡದುನ್ನಸಂದ್ರದಲ್ಲಿ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.

ಈ ತಪಾಸಣೆ ವೇಳೆಯಲ್ಲಿ ಒಬ್ಬ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.
ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.
ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.
ಅಲ್ಲದೇ ಹೊಸಕೋಟೆ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.
ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಎಸ್ ಎಲ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್. ಎಸ್, ಕಾರ್ಮಿಕ ನಿರೀಕ್ಷಕರಾದ ಯತೀಶ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮ್ಮ, ಶಿಕ್ಷಣ ಇಲಾಖೆಯ ಬಿ ಆರ್ ಪಿ ನಟರಾಜು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಸೌಮ್ಯ ಹಾಗೂ ಮಲ್ಲಿಕಾರ್ಜುನ ಹಾಜರಿದ್ದರು.

 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here