ಬೆಂಗಳೂರು, ಆಗಸ್ಟ್ 31
ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ 2022- ಹಾಗೂ 2023ನೇ ವರ್ಷದಲ್ಲಿ ಆರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಉತ್ತಮ ಸಾಧನೆಗೈದ ಅರಣ್ಯ ಇಲಾಖೆಯ ಮುಂಚೂಣಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾನ್ಯ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 03ರ ಸಂಜೆ 4.00 ಗಂಟೆಗೆ ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಅರಣ್ಯಪಡೆ ಮುಖ್ಯಸ್ಥರು, ಕರ್ನಾಟಕ ಅರಣ್ಯ ಇಲಾಖೆಯ ಬ್ರಜೇಶ್ ಕುಮಾರ್ ದೀಕ್ಷಿತ್ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.