ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕ್ರಮವಹಿಸುವ ಕುರಿತು ಮಾರ್ಗಸೂಚಿ: ಮುಖ್ಯ ಆಯುಕ್ತರು

0
701
Share this Article
0
(0)
Views: 271

ವಲಯವಾರು ಸ್ಥಾಪಿಸಿರುವ 63 ಏಕಗವಾಕ್ಷಿ ಕೇಂದ್ರಗಳ ಇಲಾಖಾವಾರು ನೋಡಲ್ ಅಧಿಕಾರಿಗಳ ನಿಯೋಜನೆ:

2024ನೇ ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿರುತ್ತದೆ. ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌(ಪಿಓಪಿ)ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸಬೇಕಾಗಿರುತ್ತದೆ.

ದಿನಾಂಕ: 27-02-2015 ರಂದು ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಭೆಯಲ್ಲಿ ತೀರ್ಮಾನವಾದ ವಿಷಯದ ಸಂಖ್ಯೆ:407/2014-15 ರ ನಿರ್ಣಯದನ್ವಯ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕಾಗಿ ತೀರ್ಮಾನವಾಗಿರುತ್ತದೆ.

ಅದರಂತೆ, ದಿನಾಂಕ: 23-08-2024 ರಂದು ಮಾನ್ಯ ಮುಖ್ಯ ಆಯುಕ್ತರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಹಾಗೂ ತೀರ್ಮಾನಗಳಂತೆ ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಲಯದ ಅಧಿಕಾರಿಗಳು ಈ ಕೆಳಕಂಡಂತೆ ಅಗತ್ಯ ಕ್ರಮವಹಿಸಲು ಸೂಚಿಸಿದೆ.

1. ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡುವ ಸಲುವಾಗಿ ಅನುಮತಿ ಪಡೆಯಲು ಉಪ ವಿಭಾಗದ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲು ಕ್ರಮಕೈಗೊಳ್ಳುವುದು. 

2. ಪಾಲಿಕೆಯ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪ ವಿಭಾಗದ ನೋಡೆಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟೀಸ್ ನೀಡಬೇಕು, ಸ್ಥಳ ತನಿಖೆ ಕೈಗೊಂಡು ರಾಸಾಯನಿಕ ಬಣ್ಣಗಳು ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ನಡೆಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿದ್ದಲ್ಲಿ ದಂಡ ವಿಧಿಸಿ ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿ ನಿಷೇಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮವಹಿಸುವುದು. ಸದರಿ ಕಾರ್ಯವನ್ನು ವಲಯ ಆಯುಕ್ತರು, ವಲಯ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸುವುದು.

3. ವಶಪಡಿಸಿಕೊಳ್ಳಲಾದ ಮೇಲ್ಕಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸುವುದು.

4. ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುವುದು.

5. ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸುವುದು.

6. ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯ ವ್ಯಾಪ್ತಿಯ ವಾರ್ಡ್‌ಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸುವುದು. ಅವಶ್ಯವಿದ್ದಲ್ಲಿ ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳುವುದು.

7. ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ‘ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸುವುದು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಿ ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಹಾಗೂ ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸುವುದು, ವಿಸರ್ಜನ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸುವುದು ಹಾಗೂ ಕಿಯಾಸ್, ಅಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿ.ಹೆಚ್.ಸಿ ಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ದವಿರುವಂತೆ ಕ್ರಮವಹಿಸುವುದು ಹಾಗೂ ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ಈಜುಗಾರರನ್ನು ನುರಿತ ಒಳಗೊಂಡಂತೆ ಎನ್‌ಡಿಆರ್ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸುವುದು.

8. ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ 8 ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸುವುದು.

9. ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳುವುದು.

10. ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುವುದು ಹಾಗೂ ಬಿ.ಬಿ.ಎಂ.ಪಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸುವ ಷರತ್ತುಗೊಳಪಡಿಸಿ, ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲು ಕ್ರಮವಹಿಸಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಕಛೇರಿ ಆದೇಶ ಮೂಲಕ ತಿಳಿಸಿರುತ್ತಾರೆ.

*63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ:*

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ. ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಒಂದೇ ಸ್ಥಳದಲ್ಲಿದ್ದು, ಅನುಮತಿ ಪತ್ರವನ್ನು ನೀಡಲಿದ್ದಾರೆ.

 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.