ಹೈನುಗಾರಿಕೆ & ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿ

0
154
Share this Article
0
(0)
Views: 76

ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 10 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಸೆಪ್ಟೆಂಬರ್‌ 24 ರಿಂದ ಆಯೋಜಿಸಲಾಗಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

      ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

      ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 18 ಕೊನೆಯ ದಿನವಾಗಿದೆ.

      ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here