ಬೆಂಗಳೂರು ಗ್ರಾಮಾಂತರ ಜಿಲ್ಲೆ:ಸೆಪ್ಟೆಂಬರ್ 14
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2024) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 2 ವರೆಗೆ ಸ್ವಭಾವ್ ಸ್ವಚ್ಛತಾ- ಸಂಸ್ಕಾರ್” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.
ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆ , ನೈರ್ಮಲ್ಯ ಸಾಧಿಸಲು ಅನುಕೂಲವಾಗುವಂತಹ ಚಟುವಟಿಕೆಗಳನ್ನು ಕೇಂದ್ರೀಕರಿಸಿ ಸ್ವಚ್ಛತಾ ಹೀ ಸೇವಾ (ಸ್ವಚ್ಛತೇ ಸೇವೆ) ಪಾಕ್ಷಿಕ ನಡೆಸಲಾಗುತ್ತಿದೆ. ಆದ್ದರಿಂದ ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಪ್ರತಿ ತಾಲ್ಲೂಕು, ನಗರಸಭೆ, ಪುರಸಭೆ, ಪ್ರತಿ ಗ್ರಾಮ ಪಂಚಾಯತಿ, ಪ್ರತಿ ಹೋಬಳಿ ಪ್ರತಿ ಗ್ರಾಮಗಳಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳು ಸಂಬಂಧಪಟ್ಟ ಎಲ್ಲಾ ಕಚೇರಿಗಳನ್ನು ಸ್ವಚ್ಛತೆ ಮಾಡುವ ಮೂಲಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಂದೋಲನದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಬೇಕು. ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಪೋಟೋಗಳನ್ನು ನಮೂದಿಸುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವೀಗೊಳಿಸಬೇಕೆಂದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.