ಅತ್ಮಹತ್ಯೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸುವುದು ಅಗತ್ಯ; ವರದರಾಜು ಬಿ

0
698
Share this Article
0
(0)
Views: 606

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಮತ್ತು ಯುವಕರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ, ಅತ್ಮಹತ್ಯೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ವರದರಾಜು ಬಿ ಅವರು ಹೇಳಿದರು.

 ಅವರು ಇಂದು ನಗರದ ರೇವಾ ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೇವಾ ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ-2024″ರ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಾಲಕರು ತಮ್ಮ ಮಕ್ಕಳ ಬಗ್ಗೆ ಜಾಗೃತಿವಹಿಸಬೇಕು. ಉತ್ತಮ ಮಾರ್ಗದರ್ಶನ ನೀಡಬೇಕು, ಕುಟುಂಬದಲ್ಲಿ ಒಳ್ಳೆಯ ವಾತಾವರಣ ಇರುವಂತೆ ನೋಡಿಕೊಳ್ಳಬೇಕು. ಕೌಟುಂಬಿಕ ಸಮಸ್ಯೆ, ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆಗಳು ಅತ್ಮಹತ್ಯೆಗೆ ಕಾರಣಗಳಾಗಿವೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಯುವ ವಯಸ್ಕರೊಂದಿಗೆ ವ್ಯವಹರಿಸುವುದು ಇಂತಹ ಜಾಗೃತಿ ಕಾರ್ಯಕ್ರಮಗಳು ಬಹಳ ಮುಖ್ಯ. ವಿದ್ಯಾರ್ಥಿಗಳು ವಯಸ್ಕರಿಗಿಂತ ಹೆಚ್ಚು ಭಾವನಾತ್ಮಕವಾಗಿ ದುರ್ಬಲರಾಗಿರುತ್ತಾರೆ.
ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯಂತಹ ವಿಪರೀತ ಕ್ರಮಗಳನ್ನು ತಗ್ಗಿಸುವಲ್ಲಿ ನಮ್ಮೆಲ್ಲೆರ ಪಾತ್ರವಿದೆ. ಈ ಸಮಸ್ಯೆಯನ್ನು ಪರಿಹರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಯುವ ಮನಸ್ಸುಗಳೊಂದಿಗೆ ವ್ಯವಹರಿಸುವಾಗ ಶೈಕ್ಷಣಿಕ ಸಂಸ್ಥೆಗಳಲ್ಲಿ ಅತಿ ಮುಖ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಸ್ವಯಂ-ಹಾನಿ ಮತ್ತು ಆತ್ಮಹತ್ಯೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತವೆ. ಆದ್ದರಿಂದ ಇಂತಹ ಕಾರ್ಯಕ್ರಮವನ್ನು ನಡೆಸುವುದು ಇಂದಿನ ಅಗತ್ಯವಾಗಿದೆ” ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ಕುರಿತು ಜಾಥಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ನಾಗರಾಜು ಎಂ.ಜಿ.,  ಯಲಹಂಕದ ರೇವಾ ವಿಶ್ವವಿದ್ಯಾನಿಲಯದ ರಿಜಿಸ್ಟರ್ ಡಾ.ಕೆ.ಎಸ್.ನಾರಾಯಣ ಸ್ವಾಮಿ., ಯಲಹಂಕದ ರೇವಾ ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಎಂ.ರಮೇಶ್., ಬೆಂಗಳೂರು ನಗರ ಜಿಲ್ಲಾ  ಮಾನಸಿಕ ಆರೋಗ್ಯ  ಕಾರ್ಯಕ್ರಮಗಳ ಮನೋವೈದ್ಯರಾದ ಡಾ.ಚೇತನ್ ಕುಮಾರ್ ಕೆ.ಎಸ್ ಹಾಗೂ ಬೆಂಗಳೂರು ನಗರ ಜಿಲ್ಲಾ ಮನೋ ಆರೋಗ್ಯಧಿಕಾರಿಗಳಾದ ಶ್ರೀ ಪ್ರಭು ಎಲ್ ಉಪಸ್ಥಿತರಿದ್ದರು.   

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here