ಯುವಕರು ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ : ಜಗದೀಶ್ ಜಿ

0
16
Share this Article
0
(0)
Views: 1

ಬೆಂಗಳೂರು ನಗರ ಜಿಲ್ಲೆ ನವೆಂಬರ್ 28

ಇಂದಿನ ಯುವ ಪೀಳಿಗೆಯಲ್ಲಿ ಸಂಸ್ಕೃತಿಯ ಕುರಿತು ಅಪಾರವಾದ ಜ್ಞಾನ, ಕಲೆ, ಸಾಹಿತ್ಯ, ಸೃಜನಶೀಲತೆ ಅಡಗಿದೆ. ಇದರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸರ್ಕಾರ ವಿವಿಧ ಅವಕಾಶ-ವೇದಿಕೆಗಳನ್ನು ಕಲ್ಪಿಸಿದ್ದು ಈ ಅವಕಾಶಗಳ ಸದುಪಯೋಗವಾಗಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ‌ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಳೂರು ನಗರ ಜಿಲ್ಲೆ, ನೆಹರು ಯುವ ಕೇಂದ್ರ ಬೆಂಗಳೂರು ನಗರ ಹಾಗೂ‌ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯವರ ಸಹಯೋಗದಲ್ಲಿ ನಗರದ ಯವನಿಕ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಯುವಜನೋತ್ಸವ -2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 ಈಗಿನ ಕಾಲದ ಯುವಕರು ಹಿಂಜೆರಿಕೆಯ ಸ್ವಭಾವವನ್ನು ಕ್ರೋಡೀಕರಿಸಿಕೊಂಡಿದ್ದಾರೆ ಯುವಕರು‌ ಅದರಿಂದ ಹೊರಬಂದಾಗ ಮಾತ್ರ ಉನ್ನತ ಮಟ್ಟದಲ್ಲಿ ಸಾಧಿಸುವ ಚಲ ಬರುತ್ತದೆ. ಯುವಕರು ಮನಸ್ಸು ಮಾಡಿದರೆ ಯಾವುದು ಕಷ್ಟರಕವಲ್ಲ, ಎಂದ ಅವರು ಯುವಕರಲ್ಲಿ ಕೌಶಲ್ಯ ಅಭಿವೃದ್ಧಿ ಉತ್ತೇಜಿಸುವ ಸಲುವಾಗಿ ಶಾಲಾ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಗ್ರಾಮೀಣ ಮಟ್ಟದಲ್ಲಿಯೂ ಕೂಡ ಸಂಸ್ಕೃತಿಯಿಂದ ಯುವಜನತೆ ವಿಮುಖರಾಗುತ್ತಿರುವುದರಿಂದ ಯುವ ಜನರಲ್ಲಿ ಸಂಸ್ಕೃತಿಯ ಮಹತ್ವವನ್ನು ಸಾರಲು ಭಾರತ ಸರ್ಕಾರ ಯುವ ಜನೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಿಂದ ಆಯ್ಕೆಯಾದ ಪ್ರತಿಭಾನ್ವಿತ ಕಲಾವಿದರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಇಂದಿನ ದಿನಗಳಲ್ಲಿ ಯುವ ಜನತೆ ಮೊಬೈಲ್ ಎಂಬ ಮಾಯಾಜಾಲದಲ್ಲಿ ಮುಳುಗಿ ಹೋಗುತ್ತಿರುವುದು ಅತ್ಯಂತ ಕಳವಳದ ಸಂಗತಿಯಾಗಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಳೆದ ವರ್ಷದ ಬೆಂಗಳೂರು ನಗರ ಜಿಲ್ಲೆಯ ಕಲಾವಿದ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಗೆದ್ದು, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದಂತಹ ಜಾನಪದ ಗೀತೆ ತಂಡಕ್ಕೆ ನೆನೆಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳಾದ ಕೆ.ಎಸ್ ಲತಾಕುಮಾರಿ ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕರಾದ ಅಶೋಕ್ ಕುಮಾರ್ ಡ್ಯಾಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಶಶಿಕಲಾ, ಬೆಂಗಳೂರು ನಗರ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾದ ಎ.ನಾಗಲಕ್ಷ್ಮಿ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರದಂತಹ ಚಿನ್ನಪ್ಪ, ನಾಗವೇಣಿ, ಶೋಭಾ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here