ಅನಧಿಕೃತ ಫ್ಲೆಕ್ಸ್/ಬ್ಯಾನರ್ ಗಳ ತೆರವು

0
75
Share this Article
0
(0)
Views: 2

ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ. 

ಅದರಂತೆ, *ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ.*

ಅನಧಿಕೃತ ಜಾಹೀರಾತುಗಳ ಮಾಹಿತಿ ನೀಡಿ:

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018″ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು / ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇದಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು *ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ* ಪಾಲಿಕೆ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here