ಬೆಂಗಳೂರು, ಮೇ 27
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಯಿಂದ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರು ಇಂದು ಅಪರಾಹ್ನ ಬೆಂಗಳೂರಿಗೆ ಆಗಮಿಸಿದರು. ಗೌರವಾನ್ವಿತರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಮಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.