ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 25
ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 10, 2024ರ ವರೆಗೆ ವಿಸ್ತರಿಸಲಾಗಿದೆ.
ಗೃಹ ರಕ್ಷಕ ಸದಸ್ಯತ್ವ ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಛೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಇಲ್ಲಿ (ಕೆಲಸದ ದಿನಗಳಲ್ಲಿ) ಉಚಿತವಾಗಿ ವಿತರಿಸಲಾಗುವುದು.
ಅರ್ಜಿಯನ್ನು ಪಡೆಯಲು ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಸ್ಥಳೀಯ ವಾಸ ಸ್ಥಳದ ದಾಖಲೆಯ ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ / ಇತ್ತೀಚಿನ ಗ್ಯಾಸ್ ರಸೀದಿ – ಮೂಲ ಪ್ರತಿಗಳನ್ನು ಹಾಜರುಪಡಿಸಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22261012 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಗೃಹರಕ್ಷಕ ದಳದ ಸಮಾದೇಷ್ಟರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .