ಬೆಂಗಳೂರು ನಗರ ಜಿಲ್ಲೆ, ಜುಲೈ 29:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಮಾಸಿಕ ಸಂಚಿತ ಗೌರವಧನದ ಆಧಾರದ ಮೇಲೆ ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನಾ ನಿರ್ದೇಶಕರ ಹುದ್ದೆಗೆ ರಾಜ್ಯ ಸರ್ಕಾರದಿಂದ ಪ್ರಸ್ತುತ ರೂ.28,875/- ಗಳ ಗೌರವಧನವನ್ನು ಹಾಗೂ ಮಾಸಿಕ ರೂ. 2,000/-ಗಳ ಪ್ರಯಾಣ ಭತ್ಯೆಯನ್ನು ನಿಗಧಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಮಾಜ ಶಾಸ್ತ್ರದ ಸ್ನಾತಕೋತ್ತರ ಪದವಿ/ ಎಂ.ಎಸ್.ಡಬ್ಲ್ಯು ( M.S.W) /ಅಭಿವೃದ್ಧಿ ಅಧ್ಯಯನ /ಲಾಭರಹಿತ ಸಂಸ್ಥೆಗಳ ನಿರ್ವಹಣಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ವಿವಿಧ ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಕುರಿತು 5 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಷ್ ಮಾತನಾಡುವ ಹಾಗೂ ಬರೆಯುವ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ. (M.S. office, internet operation ಕಡ್ಡಾಯ) 40 ವರ್ಷ ವಯೋಮಾನ ಮೀರಿರಬಾರದು. ಕಚೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.
ಯೋಜನಾ ನಿರ್ದೇಶಕರ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಪೂರ್ಣ ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವ ಪತ್ರ ಮತ್ತು ಇತರೆ ಮಾಹತಿಗಳೊಂದಿಗೆ 10 ದಿನಗಳ ಒಳಗಾಗಿ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ: 03, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 029 ಈ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.