Views: 1
ಧಾರವಾಡ ಮೇ.29:
ಜಿಲ್ಲೆಯ ಕೋಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿಂಗನಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿರುವ ನಾಲಾ ಹೂಳೆತ್ತುವ ಕಾಮಗಾರಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ನಿನ್ನೆ (ಮೇ.28) ದಿನ ಭೇಟಿ ನೀಡಿ, ವೀಕ್ಷಿಸಿದರು.
ಶಿಂಗನಹಳ್ಳಿ ಗ್ರಾಮದ ಕಾಮಗಾರಿಯನ್ನು ವೀಕ್ಷಿಸಿ ಅವರು ಕೂಲಿಕಾರರ ಸಮಸ್ಯೆ ಹಾಗೂ ಸೌಲಭ್ಯಗಳ ಬಗ್ಗೆ ಚರ್ಚಿಸಿ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಮ್ಮಿಕೊಳ್ಳಲಾದ ಕಾಮಗಾರಿಯಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲು ಅವರು ತಿಳಿಸಿದರು.
ನಂತರ ಅವರು ಶಿಂಗನಹಳ್ಳಿಯಲ್ಲಿರು ಕೂಸಿನ ಮನೆಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಚಂದ್ರು ಪೂಜಾರ , ಪಿಡಿಓ, ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿಯವರು ಹಾಜರಿದ್ದರು.