ಬೆಂಗಳೂರು, ಮೇ 31:
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ದೈವಾರ್ಷಿಕ ಚುನಾವಣೆ- 2024ರ ಸಂಬಂಧ ಜೂನ್ 3 ರಂದು ಮತದಾನ ನಡೆಯಲಿದೆ. ಬೆಂಗಳೂರು ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳು ಹಾಗೂ ಕರ್ನಾಟಕ ಆಕ್ಷೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ (ಹರಿಹರ, ದಾವಣಗೆರೆ ಮತ್ತು ಜಗಳೂರು ತಾಲ್ಲೂಕುಗಳು ಮಾತ್ರ) ಜಿಲ್ಲೆಗಳು ಒಳಪಡುತ್ತವೆ.
ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಮತದಾರರಿಗೆ ಅನುಕೂಲವಾಗುವಂತೆ ಚುನಾವಣಾಧಿಕಾರಿಗಳು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಮತ್ತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಛೇರಿಗಳಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.
ಚುನಾವಣಾಧಿಕಾರಿಗಳ ಕಛೇರಿಯ ಸಹಾಯವಾಣಿ ಸಂಖ್ಯೆ: 080-22109665, ಬೆಂಗಳೂರು ಪದವೀಧರ ಕ್ಷೇತ್ರದ ಜಿಲ್ಲಾಧಿಕಾರಿಗಳು / ಸಹಾಯಕ ಚುನಾವಣಾಧಿಕಾರಿಗಳ ಕಛೇರಿ ಸಹಾಯವಾಣಿ ಬೆಂಗಳೂರು ನಗರ ಜಿಲ್ಲೆ – 080-22211106, ಬಿ.ಬಿ.ಎಂ.ಪಿ. ಪೂರ್ವ (ಉತ್ತರ) -9480685702, ಬಿ.ಬಿ.ಎಂ.ಪಿ. ದಕ್ಷಿಣ – 080-26566362, ಬಿ.ಬಿ.ಎಂ.ಪಿ. ಕೇಂದ್ರ – 1950, ಬೆಂಗಳೂರು ಗ್ರಾಮಾಂತರ -080-29002025, ರಾಮನಗರ – 080-27275946 ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಜಿಲ್ಲಾಧಿಕಾರಿಗಳು / ಸಹಾಯಕ ಚುನಾವಣಾಧಿಕಾರಿಗಳ ಕಛೇರಿ ಸಹಾಯವಾಣಿ ವಿವರ ದಾವಣಗೆರೆ – 1800-4250380, ಚಿತ್ರದುರ್ಗ – 08194-1950, ತುಮಕೂರು – 08162-273595, ಚಿಕ್ಕಬಳ್ಳಾಪುರ – 08156-277071 ಮತ್ತು ಕೋಲಾರ – 08152-243507.
ಚುನಾವಣೆಗೆ ಸಂಬಂಧಿಸಿದಂತೆ ಪ್ರಜಾ ಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 135(ಸಿ) ರಡಿಯಲ್ಲಿ ಭಾರತ ಚುನಾವಣಾ ದಿನಾಂಕ: 26-12-2016 ರ ಪತ್ರದಲ್ಲಿನ ಕ್ರಮ ಸಂಖ್ಯೆ: 03ರ ಅಂಶ (ಘಿIಗಿ)ರಲ್ಲಿನ ನಿರ್ದೇಶನಗಳಂತೆ, ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಿಂದ ಜೂನ್ 1 ರ ಅಪರಾಹ್ನ 4 ಗಂಟೆಯಿಂದ ಮತದಾನದ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ಸಹ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶುಷ್ಕ ದಿನವನ್ನು ಘೋಷಿಸಲಾಗಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ನಿμÉೀಧಿಸಲಾಗಿದ್ದು, ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಚುನಾವಣಾ ನಿಯಮಾವಳಿಗಳ ಅನ್ವಯ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಜೂನ್ 1 ರ ಅಪರಾಹ್ನ 4-00 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ನಂತರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಕೈಗೊಳ್ಳುವುದನ್ನು ನಿμÉೀಧಿಸಿದೆ ಎಂದು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.