ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

0
42
Share this Article
0
(0)
Views: 0
ಶಿವಮೊಗ್ಗ, ಮೇ 31:
 
ಜಿಲ್ಲಾ ಮೀನುಕಾರಿಗೆ ಇಲಾಖೆಯುವ 2022-23ನೇ ಸಾಲಿಗೆ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಮಧ್ಯಮ ವರ್ಗದ ಆರ್ಎಎಸ್ ಘಟಕ ನಿರ್ಮಾಣ(ಮಹಿಳೆಯರಿಗೆ), ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ. ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
 
ಆಸಕ್ತರು ನಿಗಿಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ. 21 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 
Like
 

 
 
Comment
 
 
Share
 
 
 
 
 
 
 
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here