ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29
ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಟ್ಟಕೋಟೆ ಗ್ರಾಮ ಪಂಚಾಯತಿ, ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್, ಲಯನ್ಸ್ ಕ್ಲಬ್ ಮತ್ತು ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೋಟೆ ಗ್ರಾಮದ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಪುರುಷ ಮತ್ತು ಮಹಿಳೆಯರ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಹಾಗೂ ಅರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣಪ್ಪ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ, ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆಂಪರಾಜು, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಅಶ್ವಥ್ ನಾರಾಯಣ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು, ಶಾಲೆಯ ಮುಖ್ಯ ಶಿಕ್ಷಕರಾದ ಪ್ರಕಾಶ್ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.