ಬೆಂಗಳೂರು, ಆಗಸ್ಟ್ 30
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪ್ರೋಷಕ ಪ್ರಶಸ್ತಿ ಮತ್ತು 2024-25ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಏಕಲವ್ಯ ಪ್ರಶಸ್ತಿಗೆ ಮತ್ತು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಪನಿರ್ದೇಶಕರು/ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ/ಕ್ರೀಡಾ ಸಂಸ್ಥೆಗಳ ಮುಖಾಂತರ ಸೆಪ್ಟೆಂಬರ್ 20ರ ಒಳಗಾಗಿ ಸಲ್ಲಿಸುವುದು.
ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗೆ https://sevasindhuservices.karnataka.gov.in ಆನ್‍ಲೈನ್ ಮೂಲಕ ಸೆಪ್ಟೆಂಬರ್ 20ರ ಒಳಗಾಗಿ ಸಲ್ಲಿಸುವುದು.
2024-25ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಪನಿರ್ದೇಶಕರು/ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ/ಕ್ರೀಡಾ ಸಂಸ್ಥೆಗಳ ಮುಖಾಂತರ ಸೆಪ್ಟೆಂಬರ್ 30ರ ಒಳಗಾಗಿ ಸಲ್ಲಿಸುವುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.