ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 11
ಪ್ರತಿ ವರ್ಷದಂತೆ ಈ ವರ್ಷವೂ ಸಹ 2024 ಡಿಸೆಂಬರ್ 03 ರಂದು “ವಿಶ್ವ ವಿಕಲಚೇತನರ ದಿನಾಚರಣೆ ”ಯನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ಆಯ್ಕೆ ಮಾಡಿ ವಿತರಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಪ್ರಶಸ್ತಿಗಾಗಿ ನಿಗದಿತ ನಮೂನೆಯಲ್ಲಿ 2024ರ ಅಕ್ಟೋಬರ್ 15 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ:- ಈ ಹಿಂದೆ ಇಲಾಖೆಯಿಂದ ರಾಜ್ಯ ಪ್ರಶಸ್ತಿ ಪಡೆದಿರಬಾರದು ಮತ್ತು ಪೊಲೀಸ್ ಪ್ರಕರಣಗಳು ಇರಬಾರದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ. 03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.