ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಜಿ ಆಹ್ವಾನ

0
47
Share this Article
0
(0)
Views: 0

ಶಿವಮೊಗ್ಗ, ಜೂನ್ 13:

2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಓಇಇಖಿ) ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. 

ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಜುಲೈ 09ರೊಳಗಾಗಿ ಸಲ್ಲಿಸಬಹುದಾಗಿದ್ದು, ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಎಂದು ಉಪ ನಿರ್ದೇಶಕರು, ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here