Views: 1
ಬೆಂಗಳೂರು, ಡಿಸೆಂಬರ್ 07;
ಎಲ್ಲಾ ನಾಗರಿಕರು ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ನಿಧಿಗೆ ದೇಣಿಗೆ ನೀಡುವ ಮೂಲಕ ವೀರ ಯೋಧರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಕೈಜೋಡಿಸಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮನವಿ ಮಾಡಿದ್ದಾರೆ.
ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಕಾಪಾಡಲು ಸರ್ವಸ್ವವನ್ನೂ ತ್ಯಾಗ ಮಾಡಿದ ವೀರ ಸೈನಿಕರಿಗೆ ಗೌರವಪೂರ್ವಕವಾಗಿ ವಂದಿಸುತ್ತೇನೆ. ಸಶಸ್ತ್ರ ಪಡೆಗಳ ಧ್ವಜ ದಿನವು ನಮ್ಮ ರಕ್ಷಣೆ ಮತ್ತು ಭದ್ರತೆಗಾಗಿ ಯಾವಾಗಲೂ ಸಿದ್ಧವಾಗಿರುವ ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಲು ಸಮರ್ಪಿಸಲಾಗಿದೆ ಎಂದರು.
ಭಾರತೀಯ ಸೇನೆಯು ಭವ್ಯವಾದ ಇತಿಹಾಸವನ್ನು ಹೊಂದಿದೆ ಮತ್ತು ನಮ್ಮ ಸೇನೆಯು ವಿಶ್ವದ ಅತ್ಯುತ್ತಮ ಸೈನ್ಯ ಎಂದು ಕರೆಯಲ್ಪಡುತ್ತದೆ. ನಮ್ಮ ಸೈನಿಕರು ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷವಾದ ಗುರುತನ್ನು ಮೂಡಿಸಿದ್ದಾರೆ. ನಮ್ಮ ಸಶಸ್ತ್ರ ಪಡೆಗಳು ಯುದ್ಧಗಳ ಸಮಯದಲ್ಲಿ ದೇಶದ ಗಡಿಗಳನ್ನು ರಕ್ಷಿಸಿದ್ದರೆ, ಅವರು ಕಷ್ಟದ ಸಂದರ್ಭಗಳಲ್ಲಿ ದೇಶವಾಸಿಗಳು ಸಹಾಯ ಮತ್ತು ಪರಿಹಾರವನ್ನು ನೀಡಿದ್ದಾರೆ. ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಯುದ್ಧದಲ್ಲಿ ಗಾಯಗೊಂಡವರು ಮತ್ತು ಸರ್ವೋಚ್ಚ ತ್ಯಾಗ ಮಾಡಿದ ಸೈನಿಕರ ಕುಟುಂಬಗಳ ಕಲ್ಯಾಣ ಮತ್ತು ಪುನರ್ವಸತಿಗೆ ವಿಶೇಷ ಗಮನ ನೀಡಿವೆ ಎಂದು ಹೇಳಿದರು.
ಮಾಜಿ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿಗಾಗಿ ಅನೇಕ ಯೋಜನೆಗಳನ್ನು ಮಾಜಿ ಸೈನಿಕರ ಕಲ್ಯಾಣ ಇಲಾಖೆ, ರಕ್ಷಣಾ ಸಚಿವಾಲಯ, ಭಾರತ ಸರ್ಕಾರ ಮತ್ತು ರಾಜ್ಯ ಸೈನಿಕ ಮಂಡಳಿ ಮತ್ತು ಜಿಲ್ಲಾ ಸೈನಿಕ ಮಂಡಳಿಯಿಂದ ಜಾರಿಗೊಳಿಸಲಾಗುತ್ತಿದೆ. ಭಾರತ ಸರ್ಕಾರವು ಕಳೆದ ದಶಕದಲ್ಲಿ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಹಾಗೂ ಸೇನೆಯ ಸಬಲೀಕರಣ ಮತ್ತು ಆಧುನೀಕರಣಕ್ಕಾಗಿ ವಿಶೇಷ ಕೆಲಸ ಮಾಡಿರುವುದು ಶ್ಲಾಘನೀಯ ಎಂದು ಪ್ರಶಂಸಿದರು.
ಪ್ರಸ್ತುತ ಸೇನೆಯು ಆಧುನಿಕ ತಂತ್ರಜ್ಞಾನ, ಆಧುನಿಕ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಭಾರತೀಯ ಸೇನೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಸೈನಿಕ ಕಲ್ಯಾಣ ಮಂಡಳಿಯು ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಹಿತಾಸಕ್ತಿಗಳನ್ನು ರಕ್ಷಿಸಲು ಶ್ಲಾಘನೀಯ ಕೆಲಸ ಮಾಡುತ್ತಿದೆ. ಇದಕ್ಕಾಗಿ ಸೈನಿಕ ಕಲ್ಯಾಣ ಮಂಡಳಿಯನ್ನು ಅಭಿನಂದಿಸುತ್ತೇನೆ. ದೇಶದ ಗಡಿ ಮತ್ತು ಆಂತರಿಕ ಭದ್ರತೆಯನ್ನು ರಕ್ಷಿಸುವಲ್ಲಿ ಮಹತ್ವದ ಕೊಡುಗೆ ನೀಡಿದ ಮತ್ತು ನೀಡುತ್ತಿರುವ ಇಂತಹ ಸೈನಿಕರು ಮತ್ತು ಮಾಜಿ ಸೈನಿಕರ ಹಿತಾಸಕ್ತಿಗಳನ್ನು ರಕ್ಷಿಸಲು ಕ್ರಿಯಾ ಯೋಜನೆಯನ್ನು ರೂಪಿಸುವ ಮೂಲಕ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ದೇಶವಾಸಿಗಳಾಗಿ ನಮ್ಮ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ದೇಶದ ಸ್ವಯಂಸೇವಾ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು ಮತ್ತು ಕಾಪೆರ್Çರೇಟ್‍ಗಳು ಸಂಸ್ಥೆಗಳು, ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ಯೋಜನೆಗಳನ್ನು ರೂಪಿಸುವ ಮೂಲಕ ಅವರಿಗೆ ಸಹಾಯ ಮಾಡಬೇಕು. ನಾವು ನೀಡುವ ದೇಣಿಗೆ ಯುದ್ಧ ಯೋಧರ ವಿಧವೆಯರು, ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳ ಕಲ್ಯಾಣ ಮತ್ತು ಪುನರ್ವಸತಿಯನ್ನು ಬೆಂಬಲಿಸುತ್ತದೆ. ಈ ನಿಧಿಯು ಶಿಕ್ಷಣ, ವೈದ್ಯಕೀಯ, ಆರೈಕೆ, ಮತ್ತು ಪುನರ್ವಸತಿ ಸೇರಿದಂತೆ ವಿವಿಧ ಅಗತ್ಯಗಳಿಗೆ ಹಣಕಾಸಿನ ನೆರವು ನೀಡುತ್ತದೆ ಎಂದು ತಿಳಿಸಿದರು.
ಭಾರತೀಯ ಸೇನೆಯ ವೀರ ಸೈನಿಕರು, ಯುದ್ಧದಲ್ಲಿ ಹುತಾತ್ಮರಾದವರು, ಭವಿಷ್ಯದ ಮತ್ತು ಮಾಜಿ ವೀರ ಸೈನಿಕರು, ದೇಶಕ್ಕಾಗಿ ಅವರ ತ್ಯಾಗ ಮತ್ತು ಧೈರ್ಯಕ್ಕಾಗಿ ನನ್ನ ನಮನಗಳನ್ನು ಸಲ್ಲಿಸಿ, ಅವರ ಕುಟುಂಬಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರು ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿ, ಸಶಸ್ತ್ರ ಪಡೆಗಳ ಧ್ವಜ ನಿಧಿಯ ಕ್ಯೂ ಆರ್ ಕೋಟ್ ಅನಾವರಣಗೊಳಿಸಿದರು. ನಂತರ ಸಾಧಕರಿಗೆ ಸಶಸ್ತ್ರ ಪಡೆಗಳ ಧ್ವಜ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ನಿವೃತ್ತ ಬ್ರಿಗೇಡಿಯರ್ ಗೌರವಾನ್ವಿತ ಎಂ.ಬಿ. ಶಶಿಧರ್, ನಿವೃತ್ತ ಮೇಜರ್ ಜನರಲ್ ಬಸವರಾಜ್ ಗಿಲ್ಗಾಂಚಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು