ಬೆಂಗಳೂರು ನಗರ ಜಿಲ್ಲೆ, ಮೇ.28 :
ಇಂದು ಯಲಹಂಕ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ದೊಡ್ಡಜಾಲ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಹಾಯಕ ನಿರ್ದೇಶಕರು ಅಮರಯ್ಯ ಹಾಗೂ ಜಿಲ್ಲಾ ಐಇಸಿ ಕಾರ್ಯ ನಿರ್ವಾಹಕ ಅಧಿಕಾರಿ ನವೀನ್ ಬಾಬು ಎನ್ ಸಂಯೋಜನೆಯಲ್ಲಿ ಆಯೋಜಿಸಿದ್ದ ನರೇಗಾ ಯೋಜನೆಯಡಿ ಕೈಗೊಂಡಿರುವ “ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತರಿ” ಯೋಜನೆಗೆ ಸಂಬಂಧಿಸಿದ ಸಭೆಯನ್ನು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಅಪೂರ್ವ ಎ ಕುಲಕರ್ಣಿ ರವರ ಆಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಸಿಬ್ಬಂದಿಯಾದ ಮಂಜುನಾಥ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು/ಕಾರ್ಯದರ್ಶಿಗಳು, ಸಿಬ್ಬಂದಿ ವರ್ಗದವರು ಹಾಗೂ ನರೇಗಾ ಕೂಲಿ ಕಾರ್ಮಿಕರು ಉಪಸ್ಥಿತಿಯಲ್ಲಿದ್ದರು.