ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಸುಮಾ

0
204
Share this Article
0
(0)
Views: 87

ಬೆಂಗಳೂರು ಗ್ರಾಮಾಂತರ ಜಿಲ್ಲೆ,        ಸೆಪ್ಟೆಂಬರ್ 11 

2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾ ಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸುಮಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    2024-25 ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಈ ಕ್ರೀಡಾಕೂಟವು ಸೆಪ್ಟೆಂಬರ್ 27 ಮತ್ತು 28 ಎರಡು ದಿನಗಳ ಕಾಲ ನಡೆಯಲಿದೆ‌‌. ಸಮಾರಂಭದ ಉದ್ಘಾಟನೆಯನ್ನು ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಿ ಉದ್ಘಾಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

   ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ತಾಲ್ಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದ್ದು, ಸೆಪ್ಟೆಂಬರ್ 25 ರಂದು ದೇವನಹಳ್ಳಿ (ಟೌನ್ ಕ್ರೀಡಾಂಗಣ), ದೊಡ್ಡಬಳ್ಳಾಪುರ (ಭಗತ್ ಸಿಂಗ್ ಕ್ರೀಡಾಂಗಣ) ಹಾಗೂ ಹೊಸಕೋಟೆ (ಚನ್ನಬೈರೇಗೌಡ ಕ್ರೀಡಾಂಗಣ) ದಲ್ಲಿ ಏಕಕಾಲದಲ್ಲಿ ಚಾಲನೆಗೊಳ್ಳಲಿದೆ. ಸೆಪ್ಟೆಂಬರ್ 24 ರಂದು ನೆಲಮಂಗಲ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ‌ ಎಂದು ತಿಳಿಸಿದರು. 

  ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಂಘಟನೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೈಹಿಕ ಶಿಕ್ಷಕರ ಸೇವೆ ಆಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆ್ಯಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ, ಜಿಲ್ಲಾ, ತಾಲ್ಲೂಕು ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಿ ಸಮಾರಂಭದಲ್ಲಿ ಕುಡಿಯುವ ನೀರು, ಉಟೋಪಹಾರ ಕಲ್ಪಿಸಲು ಸಂಬಂಧಿಸಿದ‌ ಅಧಿಕಾರಿಗಳಿಗೆ‌ ಸೂಚಿಸಿದರು.

    ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ‌ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here